ETV Bharat / bharat

ಯುಪಿಯಲ್ಲಿ ಭಯಾನಕ ಘಟನೆ: ತುಂಡು ತುಂಡಾಗಿ ಕತ್ತರಿಸಿ ಯುವತಿಯ ಬರ್ಬರ ಹತ್ಯೆ - ಅರೆಬೆತ್ತಲೆ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ನಾಲ್ಕು ತುಂಡುಗಳಾಗಿ ಕತ್ತರಿಸಿದ ಅರೆಬೆತ್ತಲೆ ಸ್ಥಿತಿಯಲ್ಲಿ ಅಪರಿಚಿತ ಯುವತಿಯ ಶವ ಪತ್ತೆ. ಉತ್ತರ ಪ್ರದೇಶದ ಅಜಂಗಢ ಜಿಲ್ಲೆಯ ಅಹ್ರೌಲಾದ ಪಶ್ಚಿಮ್ಪಟ್ಟಿ ಗ್ರಾಮದಲ್ಲಿ ಘಟನೆ.

Representative image
ಸಾಂದರ್ಭಿಕ ಚಿತ್ರ
author img

By

Published : Nov 16, 2022, 9:06 AM IST

ಅಜಂಗಢ(ಯುಪಿ): ಇಡೀ ದೇಶವನ್ನು ಬೆಚ್ಚಿ ಬೀಳಿಸಿದ ಶೃದ್ಧಾ ವಾಲ್ಕರ್‌ ಎಂಬ ಮುಂಬೈ ಮೂಲದ ಯುವತಿಯ ಭೀಕರ ಕೊಲೆ ಪ್ರಕರಣ ಮಾಸುವ ಮುನ್ನವೇ ಇಂತಹದ್ದೇ ಮತ್ತೊಂದು ಹೇಯ ಕೃತ್ಯ ಉತ್ತರ ಪ್ರದೇಶದ ಅಜಂಗಢದಲ್ಲಿ ಬೆಳಕಿಗೆ ಬಂದಿದೆ.

ಹಲವು ತುಂಡುಗಳಾಗಿ ಕತ್ತರಿಸಿದ ಅಪರಿಚಿತ ಯುವತಿಯ ಶವ ಅರೆಬೆತ್ತಲೆ ಸ್ಥಿತಿಯಲ್ಲಿ ಅಜಂಗಢದ ಅಹ್ರೌಲಾ ಪೊಲೀಸ್ ಠಾಣೆ ವ್ಯಾಪ್ತಿಯ ಬಾವಿಯೊಂದರಲ್ಲಿ ಪತ್ತೆಯಾಗಿದೆ. ಮಂಗಳವಾರ ಪಶ್ಚಿಮ್ಪಟ್ಟಿ ಗ್ರಾಮದ ಬಾವಿಯಲ್ಲಿ ಶವ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹದಲ್ಲಿ ಕೇವಲ ಒಳಉಡುಪು ಇದೆ. ಕಾಲುಗಳು ಮತ್ತು ಕೈಗಳು ಬಾವಿಯಲ್ಲಿ ತೇಲುತ್ತಿರುವುದು ಕಂಡು ಬಂದಿದೆ. ಕತ್ತರಿಸಿದ ತಲೆ ಕಾಣೆಯಾಗಿದೆ ಎಂದು ವರದಿಯಾಗಿದೆ.

ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ವಿಧಿವಿಜ್ಞಾನ ತಂಡ ಮೃತದೇಹವನ್ನು ಬಾವಿಯಿಂದ ಹೊರತೆಗೆದು ಪರೀಶೀಲನೆ ನಡೆಸಿದ್ದಾರೆ. ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಫೊರೆನ್ಸಿಕ್ ತಂಡ ತನಿಖೆಯಲ್ಲಿ ತೊಡಗಿದೆ. ಪ್ರಕರಣದ ಕುರಿತು ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಹೇಳಿದ್ದಾರೆ.

ಶೃದ್ಧಾ ವಾಲ್ಕರ್‌ ಭೀಕರ ಕೊಲೆ: ಮುಂಬೈ ಮೂಲದ ಅಫ್ತಾಬ್ ಪೂನವಾಲಾ ಎಂಬ ದುರುಳ ಯುವಕ 26 ವರ್ಷದ ಶೃದ್ಧಾ ಎಂಬ ತನ್ನ ಪ್ರೇಯಸಿಯನ್ನು ಡೇಟಿಂಗ್‌ ಆ್ಯಪ್‌ನಲ್ಲಿ ಪರಿಚಯಿಸಿಕೊಂಡು, ಕೊಲೆ ಮಾಡಿ, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದೆಹಲಿಯ ನಗರದ ತುಂಬ ಚೆಲ್ಲಾಡಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಫ್ತಾಬ್‌ನನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಪ್ರೇಮಿಯನ್ನು ನಂಬಿ ಪೋಷಕರನ್ನು ಬಿಟ್ಟು ಬಂದ ಯುವತಿ.. ತುಂಡಾಗಿ ಕತ್ತರಿಸಿ ಬೀದಿಗಳಲ್ಲಿ ಎಸೆದ ಪ್ರಿಯಕರ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.