ಕಾನ್ಪುರ್(ಉತ್ತರ ಪ್ರದೇಶ): ಟ್ರಾಫಿಕ್ ಪೊಲೀಸ್ ಕಾನ್ಸ್ಟೇಬಲ್ವೋರ್ವ 25 ವರ್ಷದ ಯುವತಿ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದು, ಘಟನೆಯ ವಿಡಿಯೋ ಮೊಬೈಲ್ನಲ್ಲಿ ಸೆರೆಹಿಡಿದು ಬ್ಲಾಕ್ಮೇಲ್ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇದರಿಂದ ಮನನೊಂದು ಇದೀಗ ಆಕೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಅತ್ಯಾಚಾರವೆಸಗಿರುವ ಪೊಲೀಸ್ ಕಾನ್ಸ್ಟೇಬಲ್ ಖುದ್ದಾಗಿ ಯುವತಿಯ ಚಿಕ್ಕಪ್ಪನಾಗಿದ್ದು, ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದು ಬಂದಿದೆ. ಇದರಿಂದ ಮನನೊಂದು ಗಂಗಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದರೆ ಆಕೆಯ ರಕ್ಷಣೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆಂದು ಉಪ ಪೊಲೀಸ್ ಆಯುಕ್ತ ಪ್ರಮೋದ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ: ವಿಚ್ಛೇದಿತ ಮಗಳು ಅನುಕಂಪದ ಆಧಾರದ ಮೇಲೆ ನೇಮಕಾತಿಗೆ ಅರ್ಹಳಲ್ಲ : ಸುಪ್ರೀಂಕೋರ್ಟ್
ಮಹಿಳೆ ನೀಡಿರುವ ದೂರಿನ ಆಧಾರದ ಮೇಲೆ ಈಗಾಗಲೇ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ಯಾವುದೇ ವ್ಯಕ್ತಿಯ ಬಂಧನ ಮಾಡಿಲ್ಲ. ಯುವತಿ ಮೂಲತಃ ಮಿರ್ಜಾಪುರ್ ಜಿಲ್ಲೆಯವಳಾಗಿದ್ದು, 2019ರಲ್ಲಿ ಅಲಹಾಬಾದ್ನಲ್ಲಿ ನಡೆದ ಕುಂಭಮೇಳದಲ್ಲಿ ಭಾಗಿಯಾಗಲು ಟ್ರಾಫಿಕ್ ಹೆಡ್ ಪೊಲೀಸ್ ಕಾನ್ಸ್ಟೇಬಲ್ ಆಗಿರುವ ಚಿಕ್ಕಪ್ಪ ಆಕೆಯನ್ನು ಕರೆಯಿಸಿಕೊಂಡಿದ್ದ. ಇದಾದ ಬಳಿಕ ಹೋಟೆಲ್ವೊಂದಕ್ಕೆ ಕರೆದುಕೊಂಡು ಹೋಗಿ, ತಂಪು ಪಾನಿಯಲ್ಲಿ ಮತ್ತು ಬರುವ ಔಷಧಿ ನೀಡಿ, ಅತ್ಯಾಚಾರವೆಸಗಿದ್ದಾನೆ. ಇದರ ವಿಡಿಯೋ ಮಾಡಿ, ಮೇಲಿಂದ ಮೇಲೆ ಬ್ಲಾಕ್ಮೇಲ್ ಮಾಡಿ, ಮೇಲಿಂದ ಮೇಲೆ ಅತ್ಯಾಚಾರವೆಸಗಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾಳೆ.
ಸಂತ್ರಸ್ತೆ ಗರ್ಭಿಣಿಯಾಗುತ್ತಿದ್ದಂತೆ ಆಕೆಗೆ ಗರ್ಭನಿರೋಧಕ ಮಾತ್ರ ಸಹ ನೀಡಿದ್ದನು ಎಂದು ಪೊಲೀಸರು ತಿಳಿಸಿದ್ದು, ಕಳೆದ ಭಾನುವಾರ ಹೊಟೇಲ್ವೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಲು ಯತ್ನಿಸಿದಾಗ ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾಳೆ. ಈ ವೇಳೆ ಆಕೆಯ ಮೇಲೆ ಹಲ್ಲೆ ನಡೆಸಲಾಗಿದ್ದು, ಅವರಿಂದ ತಪ್ಪಿಸಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಇದರ ಬೆನ್ನಲ್ಲೇ ಗಂಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಯತ್ನ ನಡೆಸಿದ್ದಾಳೆಂದು ತಿಳಿದು ಬಂದಿದೆ. ತಕ್ಷಣವೇ ಘಟನಾ ಅಲ್ಲಿಗೆ ತೆರಳಿರುವ ಪೊಲೀಸರು ಯುವತಿಯ ರಕ್ಷಣೆ ಮಾಡಿದ್ದಾರೆ.
ಕೋರ್ಟ್ನಲ್ಲಿ ಯುವತಿಯ ಹೇಳಿಕೆ ದಾಖಲು ಮಾಡಿದ ನಂತರ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಬಂಧನ ಮಾಡಲಾಗುವುದು ಎಂದು ಪ್ರಮೋದ್ ಕುಮಾರ್ ಭರವಸೆ ನೀಡಿದ್ದಾರೆ.