ನವದೆಹಲಿ: ಉದ್ಯೋಗದ ಹುಡುಕಾಟದಲ್ಲಿರುವ ಯುವ ಜನತೆಗೆ ಯುಪಿಎಸ್ಸಿ ಸಿಹಿ ಸುದ್ದಿ ನೀಡಿದೆ. ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ)ವು ಹೊಸ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಿದೆ. ಶನಿವಾರ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ)ಯಲ್ಲಿ ಖಾಲಿ ಇರುವ ಜಾರಿ ಅಧಿಕಾರಿಗಳು ಮತ್ತು ಸಹಾಯಕ ಭವಿಷ್ಯ ನಿಧಿ ಆಯುಕ್ತರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಯುಪಿಎಸ್ಸಿಯ ಅಧಿಕೃತ ವೆಬ್‌ಸೈಟ್ upsc.gov.inನಲ್ಲಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಇದನ್ನೂ ಓದಿ: ಬಿಎಂಟಿಸಿಯಲ್ಲಿ 630 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮಾರ್ಚ್ 17ರ ಸಂಜೆ 6ರವರೆಗೆ ಅರ್ಜಿ ಸಲ್ಲಿಬಹುದಾಗಿದೆ. ಒಟ್ಟು 577 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ 418 ಜಾರಿ ಅಧಿಕಾರಿಗಳು (Enforcement Officers) ಮತ್ತು 159 ಸಹಾಯಕ ಭವಿಷ್ಯ ನಿಧಿ ಆಯುಕ್ತರ (Assistant Provident Fund Commissioner) ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಮೂಲಕ ಭರ್ತಿ ಮಾಡಲಾಗುತ್ತದೆ.
ಇದನ್ನೂ ಓದಿ: ಬಿಬಿಎಂಪಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಇಲ್ಲಿದೆ ವಿವರ
ಒಆರ್ಎ ಲಿಂಕ್: ಆಯ್ಕೆಯಾದ ಅಭ್ಯರ್ಥಿಗಳನ್ನು ನವದೆಹಲಿಯ ಕಚೇರಿಯಲ್ಲಿ ಎರಡು ವರ್ಷಗಳವರೆಗೆ ನೇಮಿಸಿಕೊಳ್ಳಲಾಗುತ್ತದೆ. ಆದಾಗ್ಯೂ, ಭಾರತದಲ್ಲಿ ಎಲ್ಲಿಯಾದರೂ ನಿಯೋಜನೆ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು upsconline.nic.inನಲ್ಲಿ ಆನ್‌ಲೈನ್ ನೇಮಕಾತಿ ಅರ್ಜಿ (Online Recruitment Application - ORA) ಲಿಂಕ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು 30 ವರ್ಷಗಳಾಗಿದ್ದು, ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ವಿದ್ಯಾರ್ಹತೆ: ಜಾರಿ ಅಧಿಕಾರಿಗಳು ಮತ್ತು ಸಹಾಯಕ ಭವಿಷ್ಯ ನಿಧಿ ಆಯುಕ್ತರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮತ್ತು ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕೆಂದು. ಈ ಹುದ್ದೆಯ ಅರ್ಜಿ ಶುಲ್ಕ 25 ರೂಪಾಯಿ ಇದ್ದು, ಎರಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದರೆ 50 ರೂ. ಶುಲ್ಕವಾಗಲಿದೆ. ಪರಿಶಿಷ್ಟ ಜಾತಿ, ಪಂಗಡ ಮತ್ತು ವಿಶೇಷಚೇತನರು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
79 ಪರೀಕ್ಷಾ ಕೇಂದ್ರ: ನೇಮಕಾತಿ ಪರೀಕ್ಷೆಯು ಬೆಂಗಳೂರು, ಮೈಸೂರು, ಹೈದರಾಬಾದ್ ಸೇರಿದಂತೆ ದೇಶಾದ್ಯಂತ 79 ಕೇಂದ್ರಗಳಲ್ಲಿ ನಡೆಯಲಿದೆ. ಈ ಪರೀಕ್ಷೆಯು ಬಹುಆಯ್ಕೆ ಪರೀಕ್ಷೆಯಾಗಿರಲಿದೆ. ಎಲ್ಲ ಪ್ರಶ್ನೆಗಳಿಗೆ ಸಮಾನ ಅಂಕಗಳು ಇರುತ್ತದೆ. ಪರೀಕ್ಷೆಯ ಅವಧಿ ಎರಡು ಗಂಟೆಗಳ ಕಾಲ ಆಗಿರುತ್ತದೆ. ಪ್ರತಿ ತಪ್ಪು ಉತ್ತರವು ಆ ಪ್ರಶ್ನೆಗೆ ನಿಗದಿಪಡಿಸಿದ ಅಂಕಗಳ ಮೂರನೇ ಒಂದು ಭಾಗದಷ್ಟು ಕಡಿತ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಯುಪಿಎಸ್ಸಿಯ upsc.gov.in ವೆಬ್ಸೈಟ್ಗೆ ಭೇಟಿ ನೀಡಿ ಪರಿಶೀಲಿಸಬಹುದು.
ಇದನ್ನೂ ಓದಿ: ಭಾರತೀಯ ಸೇನೆ ಸೇರಲು ಇನ್ನು ಆನ್‌ಲೈನ್ ಪರೀಕ್ಷೆ : ಹೊಸ ನಿಯಮ ಜಾರಿಗೆ