ಬೆಂಗಳೂರು: ಕೇಂದ್ರ ಲೋಕ ಸೇವಾ ಆಯೋಗದಿಂದ (ಯುಪಿಎಸ್ಸಿ) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡದಲ್ಲಿ ಸಹಾಯಕ ಗ್ರಂಥಾಲಯ ಮತ್ತು ಮಾಹಿತಿ ಅಧಿಕಾರಿ, ಸಹಾಯಕ ನಿರ್ವಾಹಕ, ಸ್ಪೇಷಲಿಸ್ಟ್, ಮಿನರಲ್ಸ್ ಅಧಿಕಾರಿಗಳು ಸೇರಿದಂತೆ ಒಟ್ಟು 43 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಬಂಧಿಸಿದ ಕ್ಷೇತ್ರದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯನ್ನು ಲಿಖಿತ ಮತ್ತು ಮೌಖಿಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ಈ ಹುದ್ದೆ, ನೇಮಕಾತಿ ಪ್ರಕ್ರಿಯೆ, ಅರ್ಜಿ ಸಲ್ಲಿಕೆ ವಿಧಾನ ಸೇರಿದಂತೆ ಇತರೆ ಅಂಶಗಳ ಕುರಿತ ಮಾಹಿತಿ ಇಲ್ಲಿದೆ.
ಯಾರು ಅರ್ಜಿ ಸಲ್ಲಿಸಬಹುದು: ಮೇಲ್ಕಂಡ ಹುದ್ದೆಗಳಿಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಸಿಎ, ಗ್ರಂಥಾಲಯ ವಿಜ್ಞಾನದಲ್ಲಿ ಪದವಿ, ಎಂಬಿಬಿಎಸ್, ಬಿಇ ಮತ್ತು ಗಣಿ ವಿಜ್ಞಾನದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ ವಯೋಮಿತಿ ಹುದ್ದೆಗೆ ಅನುಸಾರವಾಗಿ 30 ರಿಂದ 40 ವರ್ಷದವರೆಗೆ ಇದೆ. ಒಬಿಸಿ ಅಭ್ಯರ್ಥಿಗಳಿ 3 ವರ್ಷ, ಪ.ಜಾ ಮತ್ತು ಪ. ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.
ವೇತನ: ಆಯಾ ಹುದ್ದೆಗೆ ಸಂಬಂಧಿಸಿದಂತೆ ಯುಪಿಎಸ್ಸಿ ನಿಯಮ ಅನುಸಾರ ವೇತನ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಕೆ ವಿಧಾನ: ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ, ಒಬಿಸಿ ಮತ್ತು ಆರ್ಥಿಕ ಹಿಂದುಳಿದ ಅಭ್ಯರ್ಥಿಗಳು 25 ರೂ ಅರ್ಜಿ ಶುಲ್ಕ ಪಾವತಿಸಬೇಕಿದೆ. ಮಹಿಳೆಯರು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ವಿಕಲ ಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಸಿಲ್ಲ.
ಅರ್ಜಿ ಸಲ್ಲಿಕೆ ದಿನಾಂಕ: ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆ ಸೇರಿದಂತೆ ಅಗತ್ಯ ಮಾಹಿತಿಗಳೊಂದಿಗೆ ಫೆ. 15ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮಾರ್ಚ್ 16 ಆಗಿದೆ. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ಮಾರ್ಚ್ 17 ಆಗಿದೆ.
ಆಯ್ಕೆ ವಿಧಾನ: ಯುಪಿಎಸ್ಸಿ ನಿಯಮ ಅನುಸಾರ ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಈ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
ಅರ್ಜಿ ಸಲ್ಲಿಕೆ ಹೇಗೆ: ಅಭ್ಯರ್ಥಿಗಳು ಯುಪಿಎಸ್ಸಿ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿಯನ್ನು ಪಡೆದು, ಅಲ್ಲಿ ತಮ್ಮ ಮಾಹಿತಿಗಳನ್ನು ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇನ್ನು ಈ ಸಂಬಂಧ ಯುಪಿಎಸ್ಸಿ ಹೊರಡಿಸಿದ ಅಧಿಕೃತ ಅಧಿಸೂಚನೆ ಮತ್ತು ಸಂಪೂರ್ಣ ವಿವರವನ್ನು ಪರಿಶೀಲಿಸಲು ಅಭ್ಯರ್ಥಿಗಳು upsc.gov.in ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ಬಿಎಂಟಿಸಿಯಲ್ಲಿ 630 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ