ಮುಂಬೈ: ಭೀಮಾ ಕೊರೆಗಾಂವ್ ಪ್ರಕರಣದ ಆರೋಪಿ ಸ್ಟಾನ್ ಸ್ವಾಮಿಗೆ ಅನಾರೋಗ್ಯ ಹಿನ್ನೆಲೆ 15 ದಿನಗಳವರೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಬೇಕೆಂದು ಬಾಂಬೆ ಹೈಕೋರ್ಟ್ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿದೆ.
ಜೆಜೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ಮತ್ತು ಸಲಕರಣೆಗಳಿದ್ದರೂ, ಪ್ರಸ್ತುತ ಕೋವಿಡ್ ಸಂದರ್ಭದಲ್ಲಿ ಅವರ ಬಗ್ಗೆ ಗಮನ ಹರಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಎನ್.ಆರ್. ಬೋರ್ಕರ್ ಅವರಿದ್ದ ದ್ವಿಸದಸ್ಯ ಪೀಠ ಅಭಿಪ್ರಾಯ ಪಟ್ಟಿದೆ.
ಇದನ್ನೂ ಓದಿ:ಬರೀ ಗನ್ ಮಾತ್ರವಲ್ಲ, ಐಪಿಎಸ್ ವಿಶ್ವನಾಥ್ ಸಜ್ಜನರ್ ಹೃದಯ ಮಾತನಾಡುತ್ತೆ ನೋಡ್ರಿ!
ಆದ್ದರಿಂದ ಸ್ವಾಮಿಯನ್ನು ಆದಷ್ಟು ಬೇಗ ಹೋಲಿ ಫ್ಯಾಮಿಲಿ ಆಸ್ಪತ್ರೆಗೆ ವರ್ಗಾಯಿಸಬೇಕು ಎಂದು ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶಿಸಿದೆ. ಅವರ ಚಿಕಿತ್ಸಾ ವೆಚ್ಚವನ್ನು ಅವರೇ ಭರಿಸುತ್ತಾರೆ, ಅವರ ರಕ್ಷಣೆಗೆ ಪೊಲೀಸ್ ಕಾನ್ಸ್ಟೇಬಲ್ವೊಬ್ಬರನ್ನು ನೇಮಿಸಬೇಕು ಎಂದು ಕೋರ್ಟ್ ಸೂಚಿಸಿದೆ.