ETV Bharat / bharat

ವೈದ್ಯಕೀಯ ವೃತ್ತಿಯಲ್ಲಿ ಮಾನವ ಸಂಪನ್ಮೂಲ ಕೊರತೆಯ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

IT ವಲಯದಲ್ಲಿ ಭಾರತದ ಬಲವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದ ನಾಯ್ಡು, ದೂರದ ಗ್ರಾಮೀಣ ಪ್ರದೇಶಗಳಿಗೆ ಟೆಲಿಮೆಡಿಸಿನ್ ಸಂಪರ್ಕವನ್ನು ಸ್ಥಾಪಿಸುವುದು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವವನ್ನು (ಪಿಪಿಪಿ) ಉತ್ತೇಜಿಸಲು ಕರೆ ನೀಡಿದರು..

ವೈದ್ಯಕೀಯ ವೃತ್ತಿಯಲ್ಲಿ ಮಾನವ ಸಂಪನ್ಮೂಲ ಕೊರತೆ

author img

By

Published : Nov 2, 2021, 11:35 AM IST

ನವದೆಹಲಿ : ವೈದ್ಯಕೀಯ ವೃತ್ತಿಯಲ್ಲಿ ಮಾನವ ಸಂಪನ್ಮೂಲ ಕೊರತೆಯ ಸಮಸ್ಯೆಯನ್ನು ಪರಿಹರಿಸುವ ಅಗತ್ಯವನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೋಮವಾರ ಒತ್ತಿ ಹೇಳಿದರು. COVID-19 ಸಾಂಕ್ರಾಮಿಕವು ಭಾರತದ ಆರೋಗ್ಯ ಮೂಲಸೌಕರ್ಯವನ್ನು ಪ್ರಾಥಮಿಕ, ಮಾಧ್ಯಮಿಕ ಮತ್ತು ತೃತೀಯ ಹಂತಗಳಲ್ಲಿ ವಿಸ್ತರಿಸುವ ಅಗತ್ಯವನ್ನು ಎತ್ತಿ ತೋರಿಸಿದೆ ಎಂದು ಅವರು ಹೇಳಿದರು.

ವಿಜಯವಾಡದ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರೊಂದಿಗೆ ಸಂವಾದ ನಡೆಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, 2024ರ ವೇಳೆಗೆ WHO ಶಿಫಾರಸು ಮಾಡಿದ 1,000 ಜನರಿಗೆ ಒಬ್ಬ ವೈದ್ಯರ ಅನುಪಾತವನ್ನು ಸಾಧಿಸುವ ಹಾದಿಯಲ್ಲಿ ಭಾರತ ಸಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಆಯುಷ್ಮಾನ್ ಭಾರತ್ ಹೆಲ್ತ್ ಇನ್ಫ್ರಾಸ್ಟ್ರಕ್ಚರ್ ಮಿಷನ್ ಇದು ಮುಂದಿನ ನಾಲ್ಕೈದು ವರ್ಷಗಳಲ್ಲಿ ಗ್ರಾಮದಿಂದ ರಾಷ್ಟ್ರೀಯ ಮಟ್ಟಕ್ಕೆ ನಿರ್ಣಾಯಕ ಆರೋಗ್ಯ ರಕ್ಷಣೆ ಜಾಲವನ್ನು ಬಲಪಡಿಸಲು ಪ್ರಯತ್ನಿಸುತ್ತದೆ.

ತಮ್ಮ ರೋಗಿಗಳಿಗೆ ಚಿಕಿತ್ಸೆ ನೀಡುವಾಗ ಮಾನವೀಯ ಸ್ಪರ್ಶವನ್ನು ನೀಡುವಂತೆ ಉದಯೋನ್ಮುಖ ವೈದ್ಯಕೀಯ ಪದವೀಧರರಿಗೆ ವೆಂಕಯ್ಯ ನಾಯ್ಡು ಸಲಹೆ ನೀಡಿದರು. ವೈದ್ಯಕೀಯ ವೃತ್ತಿಯು ಉದಾತ್ತ ವೃತ್ತಿಗಳಲ್ಲಿ ಒಂದಾಗಿದೆ. ನೀವೆಲ್ಲರೂ ಯಾವಾಗಲೂ ಹಿಪ್ಪೊಕ್ರೇಟ್ಸ್ ಪ್ರಮಾಣಕ್ಕೆ ಬದ್ಧರಾಗಿರಬೇಕು. ಸದಾಚಾರ ಮಾರ್ಗದಿಂದ ವಿಮುಖರಾಗಬೇಡಿ ಮತ್ತು ಉನ್ನತ ನೈತಿಕ ಮಾನದಂಡಗಳನ್ನು ಕಾಪಾಡಿಕೊಳ್ಳಿ ಎಂದು ಹೇಳಿದರು.

IT ವಲಯದಲ್ಲಿ ಭಾರತದ ಬಲವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದ ನಾಯ್ಡು, ದೂರದ ಗ್ರಾಮೀಣ ಪ್ರದೇಶಗಳಿಗೆ ಟೆಲಿಮೆಡಿಸಿನ್ ಸಂಪರ್ಕವನ್ನು ಸ್ಥಾಪಿಸುವುದು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವವನ್ನು (ಪಿಪಿಪಿ) ಉತ್ತೇಜಿಸಲು ಕರೆ ನೀಡಿದರು.

ಟೆಲಿಮೆಡಿಸಿನ್ ವೆಚ್ಚವನ್ನು ಕಡಿಮೆ ಮಾಡಲು ಮತ್ತು ಗ್ರಾಮೀಣ ಭಾರತದಲ್ಲಿ ಪ್ರವೇಶವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇತ್ತೀಚೆಗೆ ಪ್ರಾರಂಭಿಸಲಾದ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಸಮರ್ಥ ಮತ್ತು ಅಂತರ್ಗತ ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ತಲುಪಿಸಲು ಅಗತ್ಯವಾದ ಪರಿಸರ ವ್ಯವಸ್ಥೆಯನ್ನು ರಚಿಸಲು ಸಹಾಯ ಮಾಡುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಗ್ರಾಮೀಣ ಭಾಗದಲ್ಲಿ ಸಿಬ್ಬಂದಿ ಕೊರತೆ ಇರುವ ಹಿನ್ನೆಲೆ ಸರಕಾರಿ ವೈದ್ಯರಿಗೆ ಮೊದಲ ಬಡ್ತಿ ನೀಡುವ ಮುನ್ನ ಗ್ರಾಮೀಣ ಸೇವೆಯನ್ನು ಕಡ್ಡಾಯಗೊಳಿಸುವಂತೆ ಸೂಚಿಸಿದರು. ಪ್ರೋತ್ಸಾಹಧನ, ವಸತಿ ಮತ್ತು ಇತರ ಮೂಲಸೌಕರ್ಯಗಳನ್ನು ಸುಧಾರಿಸುವ ಮೂಲಕ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚಿನ ವೈದ್ಯರನ್ನು ಆಕರ್ಷಿಸುವ ಅಗತ್ಯವನ್ನು ತಿಳಿಸಿದರು. ಆರೋಗ್ಯದ ಮೇಲಿನ ಹೆಚ್ಚಿನ ಹಣದ ವೆಚ್ಚಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ನಾಯ್ಡು, ಆರೋಗ್ಯವು ಕೈಗೆಟುಕುವ ಅಗತ್ಯವನ್ನು ಒತ್ತಿ ಹೇಳಿದರು.

ಅದೇ ಸಮಯದಲ್ಲಿ ಜನರಿಗೆ ಕೈಗೆಟಕುವ ದರದಲ್ಲಿ ಅತ್ಯಾಧುನಿಕ ಚಿಕಿತ್ಸಾ ವಿಧಾನಗಳನ್ನು ಒದಗಿಸುವಲ್ಲಿ ಆರೋಗ್ಯ ಕ್ಷೇತ್ರದ ಖಾಸಗಿ ವಲಯವೂ ಸರ್ಕಾರದೊಂದಿಗೆ ಕೈಜೋಡಿಸುವಂತೆ ನಾನು ಒತ್ತಾಯಿಸುತ್ತೇನೆ ಎಂದು ಅವರು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.