ನವದೆಹಲಿ: ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕ ಅಧ್ಯಕ್ಷ ಜೋ ಬೈಡನ್ ರಾಷ್ಟ್ರ ರಾಜಧಾನಿ ದೆಹಲಿಗೆ ಬಂದಿಳಿದಿದ್ದಾರೆ. ಅಮೆರಿಕದಿಂದ ಅಲ್ಲಿನ ಕಾಲಮಾನ ಪ್ರಕಾರ ಗುರುವಾರ ರಾತ್ರಿ ಬೈಡನ್ ಪ್ರಯಣ ಆರಂಭಿಸಿದ್ದರು. ಇಂದು ಸಂಜೆ 7 ಗಂಟೆ ಭಾರತಕ್ಕೆ ತಲುಪಿದ್ದಾರೆ. 2021ರ ಜನವರಿಯಲ್ಲಿ ಅಮೆರಿಕ ಅಧ್ಯಕರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಬೈಡನ್ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಂಡಿದ್ದಾರೆ.
ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬೈಡನ್ ಅವರನ್ನು ಕೇಂದ್ರ ಸಚಿವ ವಿಕೆ ಸಿಂಗ್ ಬರಮಾಡಿಕೊಂಡರು. ಅಮೆರಿಕ ಅಧ್ಯಕ್ಷ ಜೋ ಬೈಡನ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಉಭಯ ನಾಯಕರು ಜೂನ್‌ನಲ್ಲಿ ವಾಷಿಂಗ್ಟನ್‌ಗೆ ಪ್ರಧಾನಿ ಮೋದಿ ಅವರ ಅಧಿಕೃತ ಭೇಟಿಯ ಸಂದರ್ಭದಲ್ಲಿ ತೆಗೆದುಕೊಂಡ ನಿರ್ಧಾರಗಳ ಕುರಿತು ಪ್ರಗತಿಯನ್ನು ಪರಿಶೀಲಿಸುವ ಸಾಧ್ಯತೆಯಿದೆ.
-
PHOTOS | US President Joe Biden received by Union minister @Gen_VKSingh at Delhi airport.#G20India2023 #G20SummitDelhi pic.twitter.com/t12dofe3EP
— Press Trust of India (@PTI_News) September 8, 2023 " class="align-text-top noRightClick twitterSection" data="
">PHOTOS | US President Joe Biden received by Union minister @Gen_VKSingh at Delhi airport.#G20India2023 #G20SummitDelhi pic.twitter.com/t12dofe3EP
— Press Trust of India (@PTI_News) September 8, 2023PHOTOS | US President Joe Biden received by Union minister @Gen_VKSingh at Delhi airport.#G20India2023 #G20SummitDelhi pic.twitter.com/t12dofe3EP
— Press Trust of India (@PTI_News) September 8, 2023
ಇದನ್ನೂ ಓದಿ: G20 Summit: ಬ್ರಿಟನ್ ಪ್ರಧಾನಿಯಾಗಿ ಮೊದಲ ಬಾರಿಗೆ ಭಾರತಕ್ಕೆ ಆಗಮಿಸಿದ ರಿಷಿ ಸುನಕ್
ಜಿ-20 ಶೃಂಗಸಭೆಗಾಗಿ ಭಾರತಕ್ಕೆ ಭೇಟಿ ನೀಡುತ್ತಿರುವ ಅಮೆರಿಕ ಅಧ್ಯಕ್ಷರು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳ (ಸಿಡಿಸಿ) ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿದ್ದಾರೆ ಎಂದು ಶ್ವೇತಭವನ ತಿಳಿಸಿದೆ. ಪ್ರಥಮ ಮಹಿಳೆ, 72 ವರ್ಷದ ಜಿಲ್ ಬೈಡನ್ ಸೋಮವಾರ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಅಧ್ಯಕ್ಷ, 80 ವರ್ಷದ ಬೈಡನ್ ಅವರಿಗೆ ಸೋಮವಾರ ಮತ್ತು ಮಂಗಳವಾರ ಎರಡು ಬಾರಿ ಕೋವಿಡ್ ತಪಾಸಣೆಗೆ ಒಳಪಟ್ಟರು. ಅವರ ಎರಡೂ ಪರೀಕ್ಷೆಗಳು ನೆಗೆಟಿವ್ ಎಂದು ಬಂದಿವೆ ಎಂದು ಶ್ವೇತಭವನ ಮಾಹಿತಿ ನೀಡಿದೆ.
ಹಲವು ನಾಯಕರು ಆಗಮನ: ಮಹತ್ವದ ಜಿ-20 ಶೃಂಗಸಭೆಗಾಗಿ ಶುಕ್ರವಾರ ಹಲವು ರಾಷ್ಟ್ರಗಳ ನಾಯಕರು ಭಾರತಕ್ಕೆ ಬಂದಿಳಿದಿದ್ದಾರೆ. ಬ್ರಿಟನ್ ಪ್ರಧಾನಿ ರಿಷಿ ಸುನಕ್, ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್, ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ಅರ್ಜೆಂಟಿನಾದ ಅಧ್ಯಕ್ಷ ಆಲ್ಬರ್ಟೊ ಫೆರ್ನಾಂಡಿಸ್ ಮತ್ತು ಐಎಂಎಫ್ ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜಿವಾ ಈಗಾಗಲೇ ದೆಹಲಿಯಲ್ಲಿದ್ದಾರೆ.
ಯೂನಿಯನ್ ಆಫ್ ಕೊಮೊರೊಸ್ ಅಧ್ಯಕ್ಷ ಮತ್ತು ಆಫ್ರಿಕನ್ ಯೂನಿಯನ್ ಅಧ್ಯಕ್ಷ ಅಜಲಿ ಅಸ್ಸೌಮಾನಿ ಹಾಗೂ ಮಾರಿಷಸ್ ಪ್ರಧಾನಿ ಪ್ರವೀಂದ್ ಕುಮಾರ್ ಜುಗ್ನಾಥ್, ರಷ್ಯಾ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್, ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಆಂಥೋನಿ ಗುಟೆರಸ್, ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಹಾಗೂ ಒಮಾನ್ ಪ್ರಧಾನಿ ಮತ್ತು ಸುಲ್ತಾನ್ ಹೈಥಮ್ ಬಿನ್ ತಾರಿಕ್ ಅಲ್ ಸೈದ್ ಸೇರಿದಂತೆ ಹಲವರು ಜಾಗತಿಕ ನಾಯಕರು ಭಾರತಕ್ಕೆ ಬಂದಿಳಿದಿದ್ದಾರೆ.
ಪ್ರಧಾನಿ ಜತೆ ಬೈಡನ್ ಮಹತ್ವದ ಮಾತುಕತೆ: ದೆಹಲಿ ಲೋಕ ಕಲ್ಯಾಣ ಮಾರ್ಗದ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬಿಡನ್ ಮಾತುಕತೆ ನಡೆಸುತ್ತಿದ್ದಾರೆ. ಭಾರತ ಮತ್ತು ಅಮೆರಿಕ ಸಂಯುಕ್ತ ಸಂಸ್ಥಾನದ ನಡುವಿನ ಬಾಂಧವ್ಯವನ್ನು ಇನ್ನಷ್ಟು ಗಾಢಗೊಳಿಸುವ ಸಂಬಂದ ಮಾತುಕತೆ ನಡೆಯಿತು ಎಂದು ಪ್ರಧಾನಿ ಕಚೇರಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಜಿ20 ಶೃಂಗಸಭೆಗೆ ಜಾಗತಿಕ ನಾಯಕರ ಆಗಮನ: ಇಟಲಿ ಪ್ರಧಾನಿಯನ್ನು ಸ್ವಾಗತಿಸಿದ ಸಚಿವೆ ಶೋಭಾ ಕರಂದ್ಲಾಜೆ