ಅಲೀಗಢ( ಉತ್ತರ ಪ್ರದೇಶ) : ಲೋಧಾ ಠಾಣಾ ವ್ಯಾಪ್ತಿಯಲ್ಲಿ ನಕಲಿ ಮದ್ಯ ಸೇವಿಸಿ 11 ಜನರು ಮೃತಪಟ್ಟಿದ್ದು, ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಸುವಾ ಗ್ರಾಮದಲ್ಲಿ ಇಂದು ಬೆಳಗ್ಗೆ ಮದ್ಯ ಸೇವಿಸಿ ಐವರು ಮೃತಪಟ್ಟಿದ್ದಾರೆ. ಅಸ್ವಸ್ಥರಾಗಿದ್ದ ಮೂವರು ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸ್ ಆಡಳಿತಾಧಿಕಾರಿ ಪರಿಶೀಲನೆ ನಡೆಸಿ ಸ್ಥಳೀಯರಿಂದ ಮಾಹಿತಿ ಪಡೆದಿದ್ದಾರೆ. ಎರಡು ಮದ್ಯದಂಗಡಿಗಳನ್ನು ಸೀಜ್ ಮಾಡಿದ್ದು, ತನಿಖೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ಆಂಫೊಟೆರಿಸಿನ್ B ಸೇರಿ ಕಪ್ಪು ಶಿಲೀಂಧ್ರ ಔಷಧಗಳ ಆಮದು ಮೇಲೆ ತೆರಿಗೆ ವಿನಾಯಿತಿ!
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಯೋಗಿ ಆದಿತ್ಯನಾಥ್ ಅಬಕಾರಿ ಮತ್ತು ಗೃಹ ಇಲಾಖೆಯ ಅಧಿಕಾರಿಗಳಿಗೆ ಸಮನ್ಸ್ ನೀಡಿದ್ದಾರೆ. ಸರ್ಕಾರದ ಮಾರ್ಗಸೂಚಿಯಂತೆ ಮದ್ಯ ಸರಬರಾಜು ಆಗಿದ್ದರೆ, ಒಪ್ಪಂದಕ್ಕೆ ಸಹಿ ಹಾಕಬೇಕು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿ. ಅದನ್ನು ಹರಾಜಿಗಿಟ್ಟು ಮೃತರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.