ಲಕ್ನೋ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಘೋಷಣೆಯ ನಂತರ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯ ಇಂದು ಲಕ್ನೋ ಸಿವಿಲ್ ಆಸ್ಪತ್ರೆಯಲ್ಲಿ ಪ್ರಾರಂಭವಾಯಿತು. ಹಗಲು- ರಾತ್ರಿ ಬೂತ್‌ಗಳನ್ನು ತೆರೆಯಲಾಗಿದ್ದು, ರಾತ್ರಿಯಲ್ಲಿಯೂ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ದೇಶವು ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿದೆ. ಈಗ, ಪ್ರಧಾನಿಯವರ ಘೋಷಣೆಯ ನಂತರ ನಾವು 15 ವರ್ಷ ದಿಂದ 18 ವರ್ಷದವರಿಗೆ ಲಸಿಕೆ ಹಾಕಲು ಪ್ರಾರಂಭಿಸಿದ್ದೇವೆ ಎಂದಿದ್ದಾರೆ.
ಇದನ್ನೂ ಓದಿ: ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ದೆಹಲಿಯಲ್ಲಿ ಒಂದೇ ದಿನ ₹1 ಕೋಟಿ ದಂಡ ಸಂಗ್ರಹ
ಈ ಹಿಂದೆ 18 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವಯಸ್ಕರು ಕೋವಿಡ್ ಲಸಿಕೆಗಳನ್ನು ಸ್ವೀಕರಿಸುತ್ತಿದ್ದರು. ಈಗ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಉತ್ತರ ಪ್ರದೇಶದಲ್ಲಿ ನಾವು ಕೋವಿಡ್ ಸಾಂಕ್ರಾಮಿಕದ ವಿರುದ್ಧ ಧೈರ್ಯದಿಂದ ಹೋರಾಡಿದ್ದೇವೆ. ಕನಿಷ್ಠ 2,150 ಬೂತ್‌ಗಳನ್ನು ಕಾರ್ಯಗತಗೊಳಿಸಲಾಗಿದೆ. ಅಲ್ಲಿ ಮಕ್ಕಳು ಕೋವಿಡ್ ಲಸಿಕೆ ಪಡೆದುಕೊಳ್ಳಬಹುದು ಎಂದು ಯೋಗಿ ಆದಿತ್ಯನಾಥ್ ಮಾಹಿತಿ ನೀಡಿದರು.
ಹೊಸ ಕೋವಿಡ್ ರೂಪಾಂತರ ಒಮಿಕ್ರಾನ್ ಪ್ರಸರಣವು ತುಂಬಾ ವೇಗವಾಗಿದೆ. ಆದರೆ ಹೊಸ ವೈರಸ್ 'ಜೀವಕ್ಕೆ ಅಪಾಯಕಾರಿ' ಅಲ್ಲ. ಆದರೆ, ನಮ್ಮ ರಕ್ಷಣೆಯನ್ನು ನಾವು ಕಡಿಮೆ ಮಾಡಿಕೊಳ್ಳಬಾರದು, ಜಾಗರೂಕರಾಗಿರಬೇಕು ಎಂದು ಸಿಎಂ ಸಲಹೆ ನೀಡಿದರು.