ಲಖನೌ(ಉತ್ತರ ಪ್ರದೇಶ): ಐದು ಬಾರಿ ಶಾಸಕರಾಗಿದ್ದ ಅರವಿಂದ್ ಗಿರಿ(64) ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಲಖೀಂಪುರ ಖೇರಿಯ ಗೋಖರನಾಥ್ ವಿಧಾನಸಭಾ ಕ್ಷೇತ್ರದಿಂದ ಇವರು ಸ್ಪರ್ಧಿಸುತ್ತಿದ್ದರು. ಶಾಸಕರ ನಿಧನಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.
ಅರವಿಂದ ಗಿರಿ ಅವರ ನಿಧನದ ಸುದ್ದಿಯನ್ನು ಅವರ ಹಿರಿಯ ಸಹೋದರ ಮಧುಸೂದನ್ ಗಿರಿ ಖಚಿತಪಡಿಸಿದ್ದಾರೆ. ಇಂದು ಬೆಳಗ್ಗೆ ಆರೋಗ್ಯವಾಗಿದ್ದ ಅವರು ಲಖನೌಗೆ ತೆರಳುತ್ತಿದ್ದರು. ಈ ವೇಳೆ ದಾರಿಮಧ್ಯೆ ಹೃದಯಾಘಾತವಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ಅಧಿಕಾರಕ್ಕೆ ಬಂದ್ರೆ ದೇಶದ ರೈತರಿಗೆ ಉಚಿತ ವಿದ್ಯುತ್: ತೆಲಂಗಾಣ ಸಿಎಂ
ಸಮಾಜವಾದಿ ಪಕ್ಷದ ಮಾಜಿ ಎಂಎಲ್ಸಿ ಶಶಾಂಕ್ ಯಾದವ್ ಟ್ವೀಟ್ ಮಾಡಿ, ಅರವಿಂದ್ ಗಿರಿ ಓರ್ವ ತಳಮಟ್ಟದ ನಾಯಕ. ಪಕ್ಷದಲ್ಲಿ ಅವರಂತಹ ನಾಯಕರನ್ನು ಕಂಡು ಹಿಡಿಯುವುದು ತುಂಬಾ ಕಷ್ಟ ಎಂದು ಸಂತಾಪ ಸೂಚಿದ್ದಾರೆ.