ETV Bharat / bharat

ಗೋರಖನಾಥ್​ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಗೋರಖ್​ಪುರದಿಂದ ನಾಮಪತ್ರ ಸಲ್ಲಿಸಿದ ಯೋಗಿ - ಯೋಗಿ ಆದಿತ್ಯನಾಥ್ ನಾಮಪತ್ರ

UP Election 2022: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಇಂದು ಗೋರಖ್​ಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದರು.

Yogi Adityanath files nomination
Yogi Adityanath files nomination
author img

By

Published : Feb 4, 2022, 5:35 PM IST

ಗೋರಖ್​ಪುರ(ಉತ್ತರ ಪ್ರದೇಶ): ಉತ್ತರ ಪ್ರದೇಶ 403 ವಿಧಾನಸಭೆ ಕ್ಷೇತ್ರಗಳ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಇದೇ ತಿಂಗಳ 10ರಂದು ಮೊದಲ ಹಂತದ ಮತದಾನ ನಡೆಯಲಿದೆ. ಹೀಗಾಗಿ ಅನೇಕ ಪಕ್ಷಗಳು ನಾಮಪತ್ರ ಸಲ್ಲಿಕೆ ಮಾಡ್ತಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ​ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಉತ್ತರ ಪ್ರದೇಶದ ಗೋರಖ್​ಪುರ ಕ್ಷೇತ್ರದಿಂದ ಯೋಗಿ ಆದಿತ್ಯನಾಥ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ಮೂಲಕ ಮೊದಲ ಸಲ ವಿಧಾನಸಭೆ ಚುನಾವಣಾ ಕಣಕ್ಕಿಳಿದಿದ್ದಾರೆ. ಈಗಾಗಲೇ ಗೋರಖ್​ಪುರ ಸಂಸದೀಯ ಕ್ಷೇತ್ರದಿಂದ ಐದು ಸಲ ಸಂಸದರಾಗಿ ಆಯ್ಕೆಯಾಗಿರುವ ಯೋಗಿ, ಇದೇ ಮೊದಲ ಸಲ ಶಾಸಕ ಸ್ಥಾನಕ್ಕಾಗಿ ಸ್ಪರ್ಧೆ ಮಾಡಿದ್ದಾರೆ.

ಗೋರಖ್​ಪುರದಿಂದ ನಾಮಪತ್ರ ಸಲ್ಲಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​

ನಾಮಪತ್ರ ಸಲ್ಲಿಕೆ ಮಾಡುವುದಕ್ಕೂ ಮುಂಚಿತವಾಗಿ ಗೋರಖನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಕೆ ಮಾಡಿದ ಅವರು, ಹೋಮ-ಹವನದಲ್ಲಿ ಭಾಗಿಯಾದರು. ನಾಮಪತ್ರ ಸಲ್ಲಿಕೆ ಮಾಡಲು ಜಿಲ್ಲಾಧಿಕಾರಿ ಕಚೇರಿಗೆ ತೆರಳುವುದಕ್ಕೂ ಮುಂಚಿತವಾಗಿ ಮಾತನಾಡಿದ ಯೋಗಿ ಆದಿತ್ಯನಾಥ್​​ 300 ಸ್ಥಾನಗಳಲ್ಲಿ ಗೆಲುವು ದಾಖಲು ಮಾಡುವ ಇರಾದೆ ವ್ಯಕ್ತಪಡಿಸಿದ್ದಾರೆ. ಯೋಗಿ ಆದಿತ್ಯನಾಥ್​ ಅವರೊಂದಿಗೆ ಗೃಹ ಸಚಿವ ಅಮಿತ್ ಶಾ ಸಹ ಸಾಥ್ ನೀಡಿದರು.

ಇದನ್ನೂ ಓದಿರಿ: 'ಗಂಗೂಬಾಯಿ ಕಾಠಿಯಾವಾಡಿ' ಟ್ರೈಲರ್ ರಿಲೀಸ್​.. ವೇಶ್ಯೆಯಾಗಿ ಆಲಿಯಾ ಭಟ್​ ಮಿಂಚು!

ಗೋರಖ್​ಪುರ ಕ್ಷೇತ್ರದಿಂದ ಯೋಗಿ ಆದಿತ್ಯನಾಥ್​ ವಿರುದ್ಧ ಭೀಮ್ ಆರ್ಮಿ ಪಕ್ಷ ಚಂದ್ರಶೇಖರ್ ಆಜಾದ್ ಕಣಕ್ಕಿಳಿದಿದ್ದು, ಉಳಿದಂತೆ ಯಾವುದೇ ಪಕ್ಷ ಅಭ್ಯರ್ಥಿ ಹೆಸರು ಘೋಷಣೆ ಮಾಡಿಲ್ಲ.

2017ರ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ದಾಖಲೆಯ 312 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿ, ಸರ್ಕಾರ ರಚನೆ ಮಾಡಿತ್ತು. ಈ ಸಲದ ಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಪಿ, ಕಾಂಗ್ರೆಸ್​ ಹಾಗೂ ಸಮಾಜವಾದಿ ಪಕ್ಷದ ನಡುವೆ ನೇರ ಫೈಪೋಟಿ ಏರ್ಪಟ್ಟಿದೆ. ಎಲ್ಲ ಕ್ಷೇತ್ರಗಳಿಗೂ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಮುಂದಿನ ತಿಂಗಳ 10ರಂದು ಫಲಿತಾಂಶ ಬಹಿರಂಗಗೊಳ್ಳಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.