ಖುಷಿನಗರ(ಉತ್ತರ ಪ್ರದೇಶ): ಮದುವೆ ಕಾರ್ಯಕ್ರಮದ ಸಂದರ್ಭದಲ್ಲಿ ಬಾವಿಗೆ ಬಿದ್ದು ಸುಮಾರು 13 ಮಂದಿ ಮಹಿಳೆಯರು, ಹುಡುಗಿಯರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ನೆಬುವಾ ನೌರಂಗಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
1. ಮದುವೆ ಸಮಾರಂಭ: ಗ್ರಾಮದಲ್ಲಿ ಮದುವೆ ಸಮಾರಂಭ ನಡೆಯುತ್ತಿತ್ತು. ಈ ಸಮಾರಂಭಕ್ಕೆ ಒಂದು ದಿನ ಮೊದಲೇ ಕುಟುಂಬಸ್ಥರು ಮತ್ತು ಸಂಬಂಧಿಗಳು ಆಗಮಿಸಿದ್ದರು. ವಧು-ವರನಿಗೆ ಅರಿಶಿನ ಹಚ್ಚುವ ಕಾರ್ಯ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಬಾವಿ ಪೂಜೆ ನೆರವೇರಿಸುತ್ತಿದ್ದಾಗ ದುರ್ಘಟನೆ ನಡೆಯಿತು.
2. ಬಾವಿ ಪೂಜೆ: ಬುಧವಾರ ರಾತ್ರಿ 9 ಗಂಟೆಯ ಸುಮಾರಿಗೆ ಮಹಿಳೆಯರು ಮತ್ತು ಹುಡುಗಿಯರು ಸೇರಿದಂತೆ ನೂರಾರು ಜನ ಬಾವಿಗೆ ಪೂಜೆ ಸಲ್ಲಿಸಲು ತೆರಳಿದ್ದಾರೆ. ಬಾವಿಯಲ್ಲಿ ನೀರು ತುಂಬಿತ್ತು. ಜನಸಂದಣಿ ಹೆಚ್ಚಾಗಿತ್ತು. ಹುಡುಗಿಯರು ಮತ್ತು ಮಹಿಳೆಯರು, ಮಕ್ಕಳು ಬಾವಿಯ ದಂಡೆಯ ಮೇಲೆ ಕುಳಿತುಕೊಂಡು ಪೂಜೆಯ ವಿಧಾನವನ್ನು ವೀಕ್ಷಿಸುತ್ತಿದ್ದರು.
3. ನಡೀತು ದುರಂತ: ಬಾವಿಯ ದಂಡೆ ದುರ್ಬಲವಾಗಿದ್ದರಿಂದ ದಿಢೀರ್ ಕುಸಿದು ಬಿದ್ದಿದೆ. ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಬಾವಿಯೊಳಗೆ ಬಿದ್ದಿದ್ದಾರೆ. ಬಾವಿಯೊಳಗೆ ಬಿದ್ದ ತಮ್ಮ ಕುಟುಂಬಸ್ಥರನ್ನು ಕಾಪಾಡಲು ಒಬ್ಬರಂತೆ ಮತ್ತೊಬ್ಬರು ಮಹಿಳೆಯರು ಬಾವಿಗೆ ಹಾರಿದ್ದಾರೆ. ಹೀಗೆ ಸುಮಾರು 25ಕ್ಕೂ ಹೆಚ್ಚು ಮಹಿಳೆಯರು ಬಾವಿಗೆ ಬಿದ್ದಿದ್ದಾರೆ.
4. 13 ಮಹಿಳೆಯರು ಸಾವು: ಸಂಭವಿಸಿದ ದುರಂತದಲ್ಲಿ ಸುಮಾರು 9 ಮಕ್ಕಳು ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದಾರೆ. 18ಕ್ಕೂ ಹೆಚ್ಚು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ತಿಳಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದರು.
-
उत्तर प्रदेश के कुशीनगर में हुआ हादसा हृदयविदारक है। इसमें जिन लोगों को अपनी जान गंवानी पड़ी है, उनके परिजनों के प्रति मैं अपनी गहरी संवेदनाएं व्यक्त करता हूं। इसके साथ ही घायलों के जल्द से जल्द स्वस्थ होने की कामना करता हूं। स्थानीय प्रशासन हर संभव मदद में जुटा है।
— Narendra Modi (@narendramodi) February 17, 2022 " class="align-text-top noRightClick twitterSection" data="
">उत्तर प्रदेश के कुशीनगर में हुआ हादसा हृदयविदारक है। इसमें जिन लोगों को अपनी जान गंवानी पड़ी है, उनके परिजनों के प्रति मैं अपनी गहरी संवेदनाएं व्यक्त करता हूं। इसके साथ ही घायलों के जल्द से जल्द स्वस्थ होने की कामना करता हूं। स्थानीय प्रशासन हर संभव मदद में जुटा है।
— Narendra Modi (@narendramodi) February 17, 2022उत्तर प्रदेश के कुशीनगर में हुआ हादसा हृदयविदारक है। इसमें जिन लोगों को अपनी जान गंवानी पड़ी है, उनके परिजनों के प्रति मैं अपनी गहरी संवेदनाएं व्यक्त करता हूं। इसके साथ ही घायलों के जल्द से जल्द स्वस्थ होने की कामना करता हूं। स्थानीय प्रशासन हर संभव मदद में जुटा है।
— Narendra Modi (@narendramodi) February 17, 2022
5. ಘಟನಾ ಸ್ಥಳಕ್ಕೆ ಪೊಲೀಸರು ದೌಡು: ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಮೃತದೇಹಗಳನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟರು. ಜಿಲ್ಲಾಧಿಕಾರಿ, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ.
6. 2 ಗಂಟೆ ತಡವಾಗಿ ಬಂದ ಆ್ಯಂಬುಲೆನ್ಸ್: ದುರಂತ ಸಂಭವಿಸಿದ ತಕ್ಷಣವೇ ಆ್ಯಂಬುಲೆನ್ಸ್ಗೆ ಗ್ರಾಮಸ್ಥರು ಕರೆ ಮಾಡಿದ್ದಾರೆ. ಆದ್ರೆ ಆ್ಯಂಬುಲೆನ್ಸ್ ಘಟನಾ ಸ್ಥಳಕ್ಕೆ ತಲುಪಲು ಸುಮಾರು 2 ಗಂಟೆಗಳ ಕಾಲ ತಡವಾಗಿದೆ. ಅದಕ್ಕೂ ಮೊದಲು ಬಂದ ಪೊಲೀಸ್ ವಾಹನದಲ್ಲಿ ಕೆಲ ಗಾಯಾಳು ಮಹಿಳೆಯರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
7. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ: ಆಸ್ಪತ್ರೆಗೆ ದಾಖಲಾದವರ ಪೈಕಿ ಕೆಲವು ಗಾಯಾಳುಗಳ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.
ಪ್ರಧಾನಿ ಮೋದಿ, ಸಿಎಂ ಯೋಗಿ ಸಂತಾಪ: ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಸ್ಥಳೀಯ ಆಡಳಿತ ಎಲ್ಲ ರೀತಿಯ ನೆರವು ನೀಡಲಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ, ಈ ದುರ್ಘಟನೆಯಲ್ಲಿ ಸಂಭವಿಸಿದ ಪ್ರಾಣಹಾನಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡಾ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕೂಡಲೇ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ನಡೆಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.