ಡೆಹ್ರಾಡೂನ್ (ಉತ್ತರಾಖಂಡ್): ಕೆಲವು ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಇಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಡೆಹ್ರಾಡೂನ್ನ ಡೂನ್ ಆಸ್ಪತ್ರೆಗೆ ದಾಖಲಾಗಿರುವ ಅವರಿಗೆ ಡಿಸೆಂಬರ್ 18ರಂದು ಸೋಂಕು ದೃಢಪಟ್ಟಿತ್ತು. ಇದಾದ ನಂತರ ಹೋಂ ಐಸೋಲೇಷನ್ ಆಗಿದ್ದ ಅವರು ತಮ್ಮ ಸಂಪರ್ಕಕ್ಕೆ ಬಂದವರಿಗೆ ಸೋಂಕು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದರು.
ಓದಿ: 2021ರಲ್ಲಿ ಭಾರತದಲ್ಲಿ ಗೋಚರಿಸೋ ಗ್ರಹಣಗಳೆಷ್ಟು ಗೊತ್ತಾ?
ಭಾನುವಾರ ಸಂಜೆ ಸ್ವಲ್ಪಮಟ್ಟಿನ ಜ್ವರ ಕಾಣಿಸಿಕೊಂಡ ಬೆನ್ನಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಾಗಲು ಸಲಹೆ ನೀಡಿದ್ದೆವು. ಅವರ ಆರೋಗ್ಯ ಚೆನ್ನಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲಾಗಿದೆ ಎಂದು ಡೂನ್ ಆಸ್ಪತ್ರೆಯ ಕೋವಿಡ್-19 ನೂಡಲ್ ಅಧಿಕಾರಿ ಡಾ.ಅನುರಾಗ್ ಅಗರ್ವಾಲ್ ತಿಳಿಸಿದ್ದಾರೆ.
ಇದರ ಜೊತೆಗೆ ಮುಖ್ಯಮಂತ್ರಿಗಳ ಆರೋಗ್ಯದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಅವರ ಆರೋಗ್ಯದ ಮೇಲೆ ವೈದ್ಯರ ತಂಡ ನಿಗಾ ಇರಿಸಿದೆ ಎಂದು ಡಾ.ಅನುರಾಗ್ ಅಗರ್ವಾಲ್ ಹೇಳಿದ್ದಾರೆ.