ನವದೆಹಲಿ: ಉತ್ತರಾಖಂಡ ವಿಧಾನಸಭೆಯಲ್ಲಿ ಪುರೋಲಾ ಕ್ಷೇತ್ರವನ್ನು ಪ್ರತಿನಿಧಿಸುವ ಕಾಂಗ್ರೆಸ್ ಶಾಸಕ ರಾಜಕುಮಾರ್ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ ರಾಜಕುಮಾರ್, ಕಾಂಗ್ರೆಸ್ ದಲಿತರನ್ನು ದುಡಿಮೆಗಳ ಮೇಲೆ ಅವಲಂಬಿತರನ್ನಾಗಿಸಿದೆ. ಆದರೆ ಬಿಜೆಪಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೆಲಸ ಮಾಡಿದೆ ಎಂದರು.
ಈ ಹಿಂದೆಯೂ ಇವರು, ಕೋವಿಡ್-19 ವೇಳೆ ಬಡವರಿಗೆ ಉಚಿತ ಧಾನ್ಯಗಳನ್ನು ಒದಗಿಸಿದ್ದಕ್ಕಾಗಿ ಮತ್ತು ಅಭಿವೃದ್ಧಿ ಕ್ರಮಗಳನ್ನು ಕೈಗೊಂಡಿದ್ದಕ್ಕಾಗಿ ಮೋದಿ ಸರ್ಕಾರವನ್ನು ಶ್ಲಾಘಿಸಿದ್ದರು.
ಇತ್ತೀಚೆಗೆ, ಪಕ್ಷೇತರ ಶಾಸಕರಾದ ಪ್ರೀತಂಸಿಂಗ್ ಪನ್ವಾರ್ ಕೂಡ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಮುಂದಿನ ವರ್ಷಾರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಬಿಜೆಪಿ ಶಕ್ತಿ ಹೆಚ್ಚಿಸಿಕೊಳ್ಳುತ್ತಿದೆ.
ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ: ನೀರಲ್ಲಿ ಕುಳಿತು ಪ್ರತಿಭಟಿಸಿದ ಟಿಕಾಯತ್