ಚಮೋಲಿ: ಫೆಬ್ರವರಿ 7ರಂದು ಉತ್ತರಾಖಂಡದ ಚಮೋಲಿಯಲ್ಲಿ ಹಿಮಸ್ಫೋಟಿಸಿ ಉಂಟಾದ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಈ ಪೈಕಿ 10 ಮಂದಿಯನ್ನು ಮಾತ್ರ ಗುರುತಿಸಲಾಗಿದೆ.
204 ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ಐಟಿಬಿಪಿ, ಎನ್ಡಿಆರ್ಎಫ್, ಎಸ್ಡಿಆರ್ಎಫ್ ತಂಡಗಳು 5ನೇ ದಿನವೂ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿವೆ. ಇನ್ನು ಸೇತುವೆಗಳನ್ನು ಮೂಲಕ ಆಹಾರ ಸಾಮಗ್ರಿಗಳನ್ನು ಸಂತ್ರಸ್ತರಿಗೆ ಸಾಗಿಸಲಾಗುತ್ತಿದೆ.
ಇದನ್ನೂ ಓದಿ: ಹಿಂದೂ ಮಹಾಸಾಗರದಲ್ಲಿ ನೌಕಾಪಡೆಯ ಟ್ರೊಪೆಕ್ಸ್ -21 ತಾಲೀಮು..
ತಪೋವನ ಸುರಂಗದೊಳಗೆ ಹಲವರು ಸಿಲುಕಿದ್ದು, ಕೆಸರು ಮತ್ತು ಕಲ್ಲುಗಳನ್ನು ತೆರವುಗೊಳಿಸುತ್ತಿರುವ ರಕ್ಷಣಾ ತಂಡಗಳು ಸುರಂಗವನ್ನು ಕೊರೆಯಲು ಡ್ರಿಲ್ಲಿಂಗ್ ಆಪರೇಶನ್ ಆರಂಭಿಸಿರುವುದಾಗಿ ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.