ETV Bharat / bharat

ಉತ್ತರಾಖಂಡ: ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗೀಕಾರಕ್ಕೆ ದೀಪಾವಳಿ ನಂತರ ವಿಶೇಷ ಅಧಿವೇಶನ? - ಪೂರ್ವಜರ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ಸಮಾನ ಹಕ್ಕು

Uttarakhand government on UCC: ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗೀಕರಿಸಲು ದೀಪಾವಳಿ ನಂತರ ಸರ್ಕಾರ ವಿಶೇಷ ಅಧಿವೇಶನ ಕರೆಯುವ ಸಾಧ್ಯತೆಯಿದೆ.

uttarakhand-govt-to-hold-special-assembly-session-to-pass-ucc-after-diwali-committee-to-submit-report-soon
ಉತ್ತರಾಖಂಡ: ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗೀಕಾರಕ್ಕೆ ದೀಪಾವಳಿ ನಂತರ ವಿಶೇಷ ಅಧಿವೇಶನ?
author img

By ETV Bharat Karnataka Team

Published : Nov 11, 2023, 5:38 PM IST

ಡೆಹ್ರಾಡೂನ್ (ಉತ್ತರಾಖಂಡ): ದೇಶದಲ್ಲೇ ಮೊದಲ ಬಾರಿಗೆ ಏಕರೂಪ ನಾಗರಿಕ ಸಂಹಿತೆ (Uniform Civil Code - UCC) ಜಾರಿಗೆ ತರಲು ಉತ್ತರಾಖಂಡ ಸರ್ಕಾರ ಅಂತಿಮ ಸಿದ್ಧತೆ ನಡೆಸಿದೆ. ಐವರು ಸದಸ್ಯರ ತಜ್ಞರ ಸಮಿತಿಯು ತನ್ನ ವರದಿಯನ್ನು ಒಂದು ಅಥವಾ ಎರಡು ದಿನಗಳಲ್ಲಿ ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸುವ ನಿರೀಕ್ಷೆಯಿದೆ. ಈ ಮಸೂದೆಯನ್ನು ಅಂಗೀಕರಿಸಲು ದೀಪಾವಳಿ ನಂತರ ವಿಶೇಷ ಅಧಿವೇಶನ ಕರೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಎಲ್ಲ ಧರ್ಮಗಳ ಮದುವೆ, ವಿಚ್ಛೇದನ, ಉತ್ತರಾಧಿಕಾರ, ದತ್ತು, ಮಕ್ಕಳ ಪಾಲನೆ ಮತ್ತು ಇತರ ವಿಷಯಗಳಲ್ಲಿ ಏಕರೂಪತೆ ತರುವುದೇ ಏಕರೂಪ ನಾಗರಿಕ ಸಂಹಿತೆಯ ಗುರಿಯಾಗಿದೆ. ಇದು ಮದುವೆ ಅಥವಾ ಇತರ ಯಾವುದೇ ಧಾರ್ಮಿಕ ಸಂಪ್ರದಾಯಗಳಿಗೆ ಮಾನ್ಯತೆ ನೀಡುವುದಿಲ್ಲ. ಕಳೆದ ವರ್ಷ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯ ಯುಸಿಸಿ ಅನುಷ್ಠಾನ ಮಾಡುವುದಾಗಿ ಆಶ್ವಾಸನೆ ನೀಡಿತ್ತು. ಅದರಂತೆ, ಯುಸಿಸಿ ಕುರಿತು ವರದಿ ಸಿದ್ಧಪಡಿಸಲು 2022ರ ಮೇ 27ರಂದು ತಜ್ಞರ ಸಮಿತಿಯನ್ನು ರಚಿಸಲಾಗಿತ್ತು.

ಮೂಲಗಳ ಪ್ರಕಾರ, ವಿಚ್ಛೇದನವು ನ್ಯಾಯಾಲಯದ ಮೂಲಕ ಮಾತ್ರ ಮಾನ್ಯವಾಗಿರುತ್ತದೆ. ಲಿಂಗ ಸಮಾನತೆ ಮತ್ತು ಪೂರ್ವಜರ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ಸಮಾನ ಹಕ್ಕುಗಳ ಬಗ್ಗೆ ತಜ್ಞರ ಸಮಿತಿ ಒತ್ತು ನೀಡಿದೆ. ಇದೇ ವೇಳೆ, ಈ ವರದಿಯಲ್ಲಿ ಮಹಿಳೆಯರ ವಿವಾಹ ವಯೋಮಿತಿಯನ್ನು 21ಕ್ಕೆ ಏರಿಸುವಂತೆ ಶಿಫಾರಸು ಮಾಡಿಲ್ಲ. ಮದುವೆ ವಯಸ್ಸು 18ಕ್ಕೆ ಉಳಿಸಿಕೊಳ್ಳುವಂತೆ ತಿಳಿಸಿದೆ. ಆದರೆ, ಲಿವ್​ ಇನ್ ರಿಲೇಶನ್​ಶಿಪ್ ನೋಂದಣಿ ಕಡ್ಡಾಯಗೊಳಿಸುವಂತೆ ತಜ್ಞರ ಸಮಿತಿಯು ವರದಿಯಲ್ಲಿ ಶಿಫಾರಸ್ಸಿನಲ್ಲಿ ಉಲ್ಲೇಖಿಸಿದೆ ಎಂದು ತಿಳಿದು ಬಂದಿದೆ.

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಈ ಸಮಿತಿಯು ದೆಹಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪ್ರಮೋದ್ ಕೊಹ್ಲಿ, ಸಾಮಾಜಿಕ ಕಾರ್ಯಕರ್ತ ಮನು ಗೌರ್, ಮಾಜಿ ಮುಖ್ಯ ಕಾರ್ಯದರ್ಶಿ ಶತ್ರುಘ್ನ ಸಿಂಗ್ ಮತ್ತು ಡೂನ್ ವಿಶ್ವವಿದ್ಯಾಲಯದ ಉಪಕುಲಪತಿ ಸುರೇಖಾ ದಂಗ್ವಾಲ್ ಅವರನ್ನು ಒಳಗೊಂಡಿದೆ.

ಸಮಿತಿಯು ವಿವಿಧ ಮಧ್ಯಸ್ಥಗಾರರಿಂದ ಸಲಹೆಗಳನ್ನೂ ಸ್ವೀಕರಿಸಿದೆ. ಇದುವರೆಗೆ ಸಮಿತಿಯ ಅಧಿಕಾರಾವಧಿಯನ್ನು ಮೂರು ಬಾರಿ ವಿಸ್ತರಿಸಲಾಗಿದೆ. ಒಂದು ಅಥವಾ ಎರಡು ದಿನಗಳಲ್ಲಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್​ ಧಾಮಿ, ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದ ತಕ್ಷಣ ಯುಸಿಸಿಯನ್ನು ಜಾರಿಗೆ ತರಲಾಗುವುದು ಎಂದು ಹೇಳಿದ್ದರು. ಕೇಂದ್ರ ಸರ್ಕಾರವು ಯುಸಿಸಿ ಜಾರಿಗೆ ಒಲವು ಹೊಂದಿದ್ದು, ಕಾನೂನು ಆಯೋಗವು ಜನರಿಂದ ಸಲಹೆ, ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿದೆ. ಮತ್ತೊಂದೆಡೆ, ಮಧ್ಯಪ್ರದೇಶ ಮತ್ತು ಗುಜರಾತ್ ಸರ್ಕಾರಗಳು ಸಹ ಯುಸಿಸಿ ಅನುಷ್ಠಾನಕ್ಕೆ ಸಮಿತಿಗಳನ್ನು ರಚಿಸಿವೆ.

ಇದನ್ನೂ ಓದಿ: ತೆಲಂಗಾಣ ಚುನಾವಣಾ ಕಣದಲ್ಲಿ ಕೋಟ್ಯಾಧೀಶರು; ಕಾಂಗ್ರೆಸ್​ ರಾಜ್ಯಾಧ್ಯಕ್ಷರ ವಿರುದ್ಧ 89 ಕೇಸ್!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.