ಡೆಹ್ರಾಡೂನ್ : ಉತ್ತರಾಖಂಡದಲ್ಲಿ ಒಮಿಕ್ರಾನ್ನ ಮೊದಲ ಪ್ರಕರಣ ಪತ್ತೆಯಾದ ನಂತರ ಅಗತ್ಯವಿದ್ದರೆ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಮತ್ತು ಕೋವಿಡ್ ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಅಧಿಕಾರಿಗಳು ಎಚ್ಚರಿಸಿದ್ದಾರೆ.
ಸರ್ಕಾರದ ಹೇಳಿಕೆ ಪ್ರಕಾರ ವೈರಸ್ ಹರಡುವುದನ್ನು ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಲಾಗಿದೆ.
ಡಿ.22ರಂದು ಡೆಹ್ರಾಡೂನ್‌ನಲ್ಲಿ ಒಂದು ಒಮಿಕ್ರಾನ್ ಪ್ರಕರಣ ಪತ್ತೆಯಾದ ನಂತರ ಈ ಬೆಳವಣಿಗೆ ಕಂಡು ಬಂದಿದೆ. ಆಕ್ಸಿಜನ್ ಮತ್ತು ಔಷಧಿಗಳ ಜೊತೆಗೆ ಆಸ್ಪತ್ರೆಗಳಲ್ಲಿ ಹಾಸಿಗೆ ಲಭ್ಯತೆಯಂತಹ ಸೂಕ್ತ ಪೂರ್ವಸಿದ್ಧತಾ ಕ್ರಮಗಳ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಗಿದೆ.
ಇದನ್ನೂ ಓದಿ: ರಾಜಸ್ಥಾನದಲ್ಲಿ ಮತ್ತೆ ನಾಲ್ವರಿಗೆ ಒಮಿಕ್ರಾನ್ ಸೋಂಕು
ಕೋವಿಡ್ ಪರೀಕ್ಷೆ ಮತ್ತು ಲಸಿಕೆಗಾಗಿ ಮನೆ ಮನೆಗೆ ಸಮೀಕ್ಷೆಯನ್ನು ತ್ವರಿತಗೊಳಿಸಲು ನಿರ್ಧರಿಸಲಾಗಿದೆ. ಅಗತ್ಯವಿದ್ದರೆ, ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಮತ್ತು ಕೋವಿಡ್ ನಿರ್ಬಂಧಗಳನ್ನು ವಿಧಿಸುವ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಭಾರತದಲ್ಲಿ ಈವರೆಗೆ 200ಕ್ಕೂ ಹೆಚ್ಚು ಒಮಿಕ್ರಾನ್ ಪ್ರಕರಣ ವರದಿಯಾಗಿವೆ.