ETV Bharat / bharat

ಪುದುಚೇರಿ ಸಿಎಂ ವಿ. ನಾರಾಯಣಸ್ವಾಮಿ ರಾಜೀನಾಮೆ; ಅಧಿಕಾರ ಕಳೆದುಕೊಂಡ ಕಾಂಗ್ರೆಸ್

ಲೆಫ್ಟಿನೆಂಟ್ ಗವರ್ನರ್ ​​ತಮಿಳ್​​ಸಾಯಿ ಸೌಂದರ್​ರಾಜನ್​ ನಿರ್ದೇಶನದಂತೆ ಪುದುಚೇರಿ ಸಿಎಂ ನಾರಾಯಣಸ್ವಾಮಿ ವಿಧಾನಸಭೆಯಲ್ಲಿ ಇಂದು ವಿಶ್ವಾಸಮತ ಯಾಚನೆ ನಡೆಸಿದರು. ಈ ವೇಳೆ ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾಗಿದ್ದು, ರಾಜೀನಾಮೆ ನೀಡಿದ್ದಾರೆ.

author img

By

Published : Feb 22, 2021, 11:56 AM IST

ವಿ. ನಾರಾಯಣಸ್ವಾಮಿ
ವಿ. ನಾರಾಯಣಸ್ವಾಮಿ

ಪುದುಚೇರಿ: ಇಂದು ಕೇಂದ್ರಾಡಳಿತ ಪ್ರದೇಶ ಪುದುಚೇರಿ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ನಾರಾಯಣಸ್ವಾಮಿ ಬಹುಮತ ಸಾಬೀತು ಪಡಿಸುವಲ್ಲಿ ವಿಫಲರಾಗಿದ್ದು, ರಾಜೀನಾಮೆ ನೀಡಿದ್ದಾರೆ.

ಇಬ್ಬರು ಕಾಂಗ್ರೆಸ್ ಶಾಸಕರಾದ ಎ. ಜಾನ್ ಕುಮಾರ್, ಲಕ್ಷ್ಮಿ ನಾರಾಯಣನ್ ಮತ್ತು ಡಿಎಂಕೆ ಶಾಸಕ ಕೆ. ವೆಂಕಟೇಶನ್ ತಮ್ಮ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ನಂತರ ರಾಜಕೀಯ ಬಿಕ್ಕಟ್ಟು ಉದ್ಭವಿಸಿತ್ತು. ಈ ಹಿನ್ನೆಲೆ ಲೆಫ್ಟಿನೆಂಟ್ ಗವರ್ನರ್ ತಮಿಳ್​​ಸಾಯಿ ಸೌಂದರರಾಜನ್ ಅವರು ವಿ. ನಾರಾಯಣಸ್ವಾಮಿ ಅವರಿಗೆ ಇಂದು ವಿಶ್ವಾಸಮತ ಯಾಚನೆ ನಡೆಸುವಂತೆ ನಿರ್ದೇಶನ ನೀಡಿದ್ದರು. ಇಂದು ನಡೆದ ವಿಶ್ವಾಸಮತ ಯಾಚನೆಯಲ್ಲಿ ಆಡಳಿತ ಪಕ್ಷ ಬಹುಮತ ಸಾಬೀತು ಪಡಿಸುವಲ್ಲಿ ವಿಫಲವಾಗಿದ್ದು, ನಾರಾಯಣಸ್ವಾಮಿ ಅವರು ರಾಜೀನಾಮೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.