ನವದೆಹಲಿ: ಕಳೆದ ಕೆಲ ದಿನಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತನಾಡಿದ್ದಾರೆ.
ಕೇಂದ್ರ ಸರ್ಕಾರ ಅನುಮತಿ ನೀಡಿದ್ರೆ ಮುಂದಿನ ಮೂರು ತಿಂಗಳಲ್ಲಿ ದೆಹಲಿಯಲ್ಲಿ ವಾಸವಾಗಿರುವ ಎಲ್ಲರಿಗೂ ಕೋವಿಡ್ ವ್ಯಾಕ್ಸಿನ್ ನೀಡಲಾಗುವುದು. ಈಗಾಗಲೇ ಟ್ರ್ಯಾಕಿಂಗ್, ಟ್ರೇಸಿಂಗ್ ಮತ್ತು ಐಸೋಲೇಷನ್ ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಅದೇಶ ನೀಡಲಾಗಿದೆ ಎಂದಿರುವ ಕೇಜ್ರಿವಾಲ್, ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ ಎಂದರು.
ಲಸಿಕೆ ಪಡೆದುಕೊಳ್ಳುವಂತೆ ಅರ್ಹರಾದ ಪ್ರತಿಯೊಬ್ಬರಿಗೂ ಮನವಿ ಮಾಡುತ್ತಿದ್ದೇನೆ ಎಂದಿರುವ ಕೇಜ್ರಿವಾಲ್, ಇದೀಗ ಪ್ರತಿ ದಿನ 30 ರಿಂದ 40 ಸಾವಿರ ಲಸಿಕೆ ನೀಡಲಾಗುತ್ತಿದೆ. ಇದನ್ನು ದಿನಕ್ಕೆ 1.25 ಲಕ್ಷ ಲಸಿಕೆ ನೀಡಲು ಮುಂದಾಗಿದ್ದೇವೆ.
ಇದನ್ನೂ ಓದಿ: ಮದುವೆಗೆ ತೆರಳುತ್ತಿದ್ದ ವಾಹನ ಪಲ್ಟಿ: ಐವರ ದುರ್ಮರಣ, 50 ಜನರಿಗೆ ಗಾಯ
ಕೇಂದ್ರ ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡಲು ಅವಕಾಶ ನೀಡಿದ್ರೆ ನಾವು ಮುಂದಿನ ಮೂರು ತಿಂಗಳಲ್ಲಿ ದೆಹಲಿಯಲ್ಲಿ ಇರುವ ಎಲ್ಲರಿಗೂ ವ್ಯಾಕ್ಸಿನ್ ನೀಡಲು ಸಿದ್ಧರಾಗಿದ್ದೇವೆ. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ಹೆಚ್ಚಿನ ಕೋವಿಡ್ ಸೆಂಟರ್ ಓಪನ್ ಮಾಡಲು ಅವಕಾಶ ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.