ಜಮ್ಮು ಮತ್ತು ಕಾಶ್ಮೀರ: ವೈಷ್ಣೋದೇವಿ ದೇಗುಲಕ್ಕೆ ತೀರ್ಥಯಾತ್ರೆಗೆ ಬರುವ ವೇಳೆ ಉಂಟಾಗಬಹುದಾದ ಯಾವುದೇ ಅನಿರೀಕ್ಷಿತ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ವಿಪತ್ತು ನಿರ್ವಹಣಾ ತಂಡಗಳನ್ನು ಸಜ್ಜುಗೊಳಿಸಲು ವೈಷ್ಣೋದೇವಿ ದೇಗುಲ ಮಂಡಳಿ ನಿಯಮಿತವಾಗಿ ಅಣಕು ಕಸರತ್ತು ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಾರ್ಷಿಕ ತೀರ್ಥಯಾತ್ರೆಗೆ ವಿಪತ್ತು ನಿರ್ವಹಣಾ ಸನ್ನದ್ಧತೆಯ ವಿವಿಧ ಅಂಶಗಳನ್ನು ಪರಿಶೀಲಿಸಲು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ರಮೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮಾತಾ ವೈಷ್ಣೋ ದೇವಿ ದೇಗುಲ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು. ದೇಗುಲದ ದಾರಿ ಮತ್ತು ದೇವಾಲಯದ ಬಳಿ ಅಣಕು ಕಸರತ್ತು ನಡೆಸಲು ಅಗ್ನಿಶಾಮಕ ಮತ್ತು ತುರ್ತು ಸೇವಾ ವಿಭಾಗವನ್ನು ಸಂಪರ್ಕಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ಮುಗಿದು ಎಲ್ಲವೂ ಸಾಮಾನ್ಯ ಸ್ಥಿತಿಗೆ ಮರಳಿದ ಬಳಿಕ ಮಂಡಳಿಯ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲಾಗುವುದು ಎಂದು ಅವರು ಹೇಳಿದ್ದಾರೆ.