ETV Bharat / bharat

ಲಾರಿ ಪಲ್ಟಿಯಾಗಿ ಮಕ್ಕಳು ಸೇರಿ ನಾಲ್ವರು ದುರ್ಮರಣ

ನರವರ ಪಟ್ಟಣದಿಂದ ಗೋಧಿ ತುಂಬಿಕೊಂಡು ಹೊರಟಿದ್ದ ಲಾರಿಯು ಜೌರಾಶಿ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳು, ಓರ್ವ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

author img

By

Published : Jun 2, 2021, 7:16 PM IST

vehicle over turned, 4 persons killed in  accident
ಲಾರಿ ಪಲ್ಟಿ; ಮಗು ಸೇರಿ ನಾಲ್ವರು ದುರ್ಮರಣ

ಗ್ವಾಲಿಯರ (ಮಧ್ಯ ಪ್ರದೇಶ): ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಪಲ್ಟಿಯಾಗಿ ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಜೌರಾಶಿ ಘಾಟಿ ಹೈವೇಯಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಐವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನರವರ ಪಟ್ಟಣದಿಂದ ಗೋಧಿ ತುಂಬಿಕೊಂಡು ಹೊರಟಿದ್ದ ಲಾರಿಯು ಜೌರಾಶಿ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳು, ಓರ್ವ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬಿಲೋವಾ ಪೊಲೀಸರು, ತಕ್ಷಣ ಆ್ಯಂಬುಲೆನ್ಸ್​ ವ್ಯವಸ್ಥೆ ಮಾಡಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದರು.

ಚಾಲಕನು ಲಾರಿಯನ್ನು ಅತಿಯಾದ ವೇಗದಲ್ಲಿ ಚಾಲನೆ ಮಾಡಿದ್ದರಿಂದ, ನಿಯಂತ್ರಣ ತಪ್ಪಿದ ವಾಹನ ಡಿವೈಡರ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.