ETV Bharat / bharat

ಮತ್ತಷ್ಟು ಹದಗೆಟ್ಟ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ: ಐಸಿಯುನಲ್ಲಿ ಚಿಕಿತ್ಸೆ

ಕೆಲವು ದಿನಗಳ ಅವರು ಕೋವಿಡ್ ಸೋಂಕು ಮತ್ತು ನ್ಯುಮೋನಿಯಾದಿಂದ ಚೇತರಿಸಿಕೊಂಡಿದ್ದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

Veteran singer Lata Mangeshkar's health condition has deteriorated again
ಮತ್ತೆ ಹದಗೆಟ್ಟ ಲತಾ ಮಂಗೇಶ್ಕರ್ ಆರೋಗ್ಯ: ಐಸಿಯುನಲ್ಲಿ ಚಿಕಿತ್ಸೆ
author img

By

Published : Feb 5, 2022, 2:17 PM IST

Updated : Feb 5, 2022, 4:22 PM IST

ಮುಂಬೈ(ಮಹಾರಾಷ್ಟ್ರ): ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದ್ದು, ಅವರನ್ನು ವೆಂಟಿಲೇಟರ್​ನಲ್ಲಿ ಇರಿಸಲಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತಜ್ಞ ವೈದ್ಯರು ಮಾಹಿತಿ ನೀಡಿದ್ದಾರೆ.

ಆರೋಗ್ಯ ಮತ್ತೆ ಹದಗೆಟ್ಟಿರುವ ಕಾರಣದಿಂದ ಲತಾ ಮಂಗೇಶ್ಕರ್ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಮೇಲೆ ವೈದ್ಯರ ನಿಗಾ ಇರಿಸಲಾಗಿದೆ ಎಂದು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಗೆ ದಾಖಲಾದಾಗ ಲತಾ ಮಂಗೇಶ್ಕರ್ ಅವರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು. ಕೆಲವು ದಿನಗಳ ಹಿಂದೆ ಅವರು ಕೋವಿಡ್ ಸೋಂಕು ಮತ್ತು ನ್ಯುಮೋನಿಯಾದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ ತಿಳಿಸಿದ್ದರು.

ಇದನ್ನೂ ಓದಿ: ಇದ್ದಕ್ಕಿದ್ದಂತೆ ಕಾಣೆಯಾದ ಐಟಂ ಸಾಂಗ್​ ಸುಂದರಿ ನೋರಾ ಫತೇಹಿ ಇನ್‌ಸ್ಟಾಗ್ರಾಮ್ ಖಾತೆ!

ಜನವರಿ 9ರಂದು ಕೋವಿಡ್​ ದೃಢಪಟ್ಟ ಹಿನ್ನೆಲೆ ಲತಾ ಮಂಗೇಶ್ಕರ್​ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯ ಸುಧಾರಿಸಿದ ಹಿನ್ನೆಲೆಯಲ್ಲಿ ಅವರಿಗೆ ಅಳವಡಿಸಿದ್ದ ವೆಂಟಿಲೇಟರ್​ ಅನ್ನು ಹಿಂದಿನ ವಾರವಷ್ಟೇ ತೆಗೆದುಹಾಕಲಾಗಿತ್ತು.

'ಲತಾ ದೀದಿ ಶೀಘ್ರವಾಗಿ ಚೇತರಿಸಿಕೊಳ್ಳಲು ಮತ್ತು ಮನೆಗೆ ಮರಳಲು ಪ್ರಾರ್ಥಿಸೋಣ. ಅವರ ಆರೋಗ್ಯದ ಕುರಿತ ಸುಳ್ಳು ಸುದ್ದಿ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ' ಎಂದು ಲತಾ ಮಂಗೇಶ್ಕರ್​ರ ವಕ್ತಾರರು ಈ ಹಿಂದೆಯೇ ಮನವಿ ಮಾಡಿದ್ದರು. ಈಗ ಆರೋಗ್ಯ ಹದಗೆಟ್ಟಿದ್ದು, ಐಸಿಯುನಲ್ಲಿಟ್ಟು ಚಿಕಿತ್ಸೆ ಮುಂದುವರೆಸಲಾಗಿದೆ.

Last Updated : Feb 5, 2022, 4:22 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.