ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ಹೈದರಾಬಾದ್ ಭೇಟಿ ಹಲವು ವಿಶೇಷ ಕ್ಷಣಗಳಿಗೆ ಸಾಕ್ಷಿಯಾಗಿದೆ. ಅಂತಾರಾಷ್ಟ್ರೀಯ ಬೆಳೆಗಳ ಸಂಶೋಧನಾ ಸಂಸ್ಥೆ (ICRISAT) ಕೇಂದ್ರ ಉದ್ಘಾಟನೆ ಬಳಿಕ ಫಾರ್ಮ್‌ಗೆ ತೆರಳಿದ ಪ್ರಧಾನಿ, ಗಿಡದಿಂದ ಕಡಲೆ ಬಿಡಿಸಿ, ತಿಂದು ರುಚಿ ನೋಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ.
ICRISAT ಕ್ಯಾಂಪಸ್ನ ಅಂತಾರಾಷ್ಟ್ರೀಯ ಬೆಳೆಗಳ ಸಂಶೋಧನಾ ಸಂಸ್ಥೆಯ 50ನೇ ವಾರ್ಷಿಕೋತ್ಸವ ಆಚರಣೆ ಹಿನ್ನೆಲೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಭಾಗಿಯಾಗಿ ವಿಶೇಷವಾಗಿ ವಿನ್ಯಾಸಗೊಳಿಸಿದ ICRISAT ಲೋಗೋವನ್ನು ಅನಾವರಣಗೊಳಿಸಿದರು. ಈ ಸಂದರ್ಭದ ಸ್ಮರಣಾರ್ಥವಾಗಿ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು. ಈ ವೇಳೆ ತಮಿಳಿಸಾಯಿ ಸೌಂದರರಾಜನ್, ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್ ಮತ್ತು ಜಿ.ಕಿಶನ್ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ICRISAT ಕಾರ್ಯಕ್ರಮ ಮುಗಿಸಿ ಶ್ರೀರಾಮಾನುಜಾಚಾರ್ಯರ ಪ್ರತಿಮೆ ಅನಾವರಣ ಹಾಗೂ ದೇಗುಲ ದರ್ಶನಕ್ಕೆ ತೆರಳುವ ವೇಳೆ ಮೋದಿ ದಿಢೀರ್ ICRISAT ಫಾರ್ಮ್‌ಗೆ ಭೇಟಿ ನೀಡಿದರು. ಈ ವೇಳೆ ಫಾರ್ಮ್‌ನಲ್ಲಿದ್ದ ವಿವಿಧ ಬೆಳೆಗಳ ಮಾಹಿತಿ ಪಡೆದುಕೊಂಡರು. ಅಷ್ಟೇ ಅಲ್ಲದೆ ಬೆಳೆದಿದ್ದ ಕಡಲೆ ಬೀಜ ರುಚಿ ನೋಡಿ ಸಂತಸ ಹಂಚಿಕೊಂಡರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಓದಿ: ಭಾರತದ ಅಭಿವೃದ್ಧಿಯ ಬಗ್ಗೆ ಲತಾ ಮಂಗೇಶ್ಕರ್ ಉತ್ಸುಕರಾಗಿದ್ದರು: ಪ್ರಧಾನಿ ಮೋದಿ ಸಂತಾಪ