ಕಟಕ್(ಒಡಿಶಾ): ಕಟಕ್‌ನ ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಚಲಿಸುತ್ತಿದ್ದ ರೈಲಿನಿಂದ ಜಾರಿ ಬಿದ್ದ ವ್ಯಕ್ತಿಯೊಬ್ಬರ ಜೀವವನ್ನು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಭದ್ರತಾ ಸಿಬ್ಬಂದಿ ರಕ್ಷಿಸಿರುವ ಘಟನೆ ಬುಧವಾರ ನಡೆದಿದೆ.
ಚಲಿಸುತ್ತಿದ್ದ ರೈಲಿನಿಂದ ಬೀಳುತ್ತಿದ್ದ ವ್ಯಕ್ತಿಯನ್ನು ಸಫೀದ್ ಖಾನ್ ಎಂಬ ಆರ್‌ಪಿಎಫ್ ಭದ್ರತಾ ಪಡೆ ಅಧಿಕಾರಿ ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ. ರೈಲು ನಿಲ್ದಾಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಇಡೀ ಘಟನೆ ಸೆರೆಯಾಗಿದೆ.
ಓದಿ: ಎರಡು ವರ್ಷಗಳ ನಂತರ ಭಾರತ-ಬಾಂಗ್ಲಾ ನಡುವೆ 'ಬಂಧನ್', 'ಮೈತ್ರಿ'ಗೆ ಚಾಲನೆ
ಪುರುಷೋತ್ತಮ್ ಎಕ್ಸ್‌ಪ್ರೆಸ್ ಟ್ರೈನ್ ಕಟಕ್ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 4ಕ್ಕೆ ಆಗಮಿಸುತ್ತಿದ್ದಾಗ ಪ್ರಯಾಣಿಕನೊಬ್ಬ ರೈಲಿನಿಂದ ಇಳಿಯಲು ಯತ್ನಿಸಿದ್ದಾರೆ. ಈ ವೇಳೆ ಆಯತಪ್ಪಿ ಬೀಳುತ್ತಿದ್ದರು. ಇದನ್ನು ಗಮನಿಸಿದ ಆರ್‌ಪಿಎಫ್ ಅಧಿಕಾರಿ ಅವರನ್ನು ಕಾಪಾಡಿದರು. ಚಲಿಸುತ್ತಿದ್ದ ರೈಲಿನಿಂದ ಬಿದ್ದ ಪ್ರಯಾಣಿಕ ಬಿಹಾರದಿಂದ ಕಟಕ್‌ಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.