ಸಂಬಲ್ಪುರ (ಒಡಿಶಾ): ಅರಣ್ಯಾಧಿಕಾರಿಗಳು ಬರುವವರೆಗೂ ಹೆಬ್ಬಾವನ್ನು ಕಂಬಕ್ಕೆ ಕಟ್ಟಿ ಹಾಕಿರುವ ವಿಚಿತ್ರ ಘಟನೆ ಜಿಲ್ಲೆಯ ಮಾಣೇಶ್ವರ್ ಬ್ಲಾಕ್ನ ತಲ್ಪಾಲಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಭಕ್ತ ಪಧಾನ್ ಎಂಬಾತ ಹೆಬ್ಬಾವು ಕಟ್ಟಿಹಾಕಿದವರು. ಮನೆಯ ಬಳಿ ದೈತ್ಯ ಹೆಬ್ಬಾವೊಂದು ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಭಕ್ತ, ಹೆಬ್ಬಾವನ್ನು ಹಿಡಿದು ಕಂಬಕ್ಕೆ ಕಟ್ಟಿಹಾಕಿ ಬಳಿಕ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಮಕ್ಕಳು ಸೇರಿದಂತೆ ಗ್ರಾಮಸ್ಥರು ಕಾಲುವೆಯಲ್ಲಿ ಸ್ನಾನ ಮಾಡಲು ಹೋಗುತ್ತಾರೆ. ಈ ಹಿನ್ನೆಲೆ ಅವರಿಗೆ ಯಾವ ತೊಂದರೆಯೂ ಆಗದಂತೆ ಹಾವನ್ನು ಕಂಬಕ್ಕೆ ಕಟ್ಟಿಹಾಕಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಹಾವನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.
ಇದನ್ನೂ ಓದಿ: ಹೈದರಾಬಾದ್ನಲ್ಲಿ ವಿಶ್ವದ ಅತಿ ದೊಡ್ಡ ಬ್ಯಾಟ್ ಅನಾವರಣ