ಸಿಯೋನಿ( ಮಧ್ಯಪ್ರದೇಶ): ಕೊರೊನಾ ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ತೆರಳಿದ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಮಧ್ಯಪ್ರದೇಶ ಸಿಯೋನಿ ಜಿಲ್ಲೆಯಲ್ಲಿ ನಡೆದಿದೆ.
ಸಿಯೋನಿ ಜಿಲ್ಲೆಯ ಘನ್ಸೋರ್ ತಹಸಿಲ್ ಬಳಿಯಿರುವ ಪೌನಾರ್ಜಿರ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯರು ಕೋಲು ಹಿಡಿದು ಅಧಿಕಾರಿಗಳನ್ನು ಅಟ್ಟಾಡಿಸಿದ್ದಾರೆ.
ಘಟನೆಯ ವಿಡಿಯೋ ವೈರಲ್ ಆಗಿದ್ದು, ಲಸಿಕೆ ಬಗ್ಗೆ ಇರುವ ತಪ್ಪು ಮಾಹಿತಿಯಿಂದ ಗ್ರಾಮಸ್ಥರು ಈ ರೀತಿ ವರ್ತಿಸಿದ್ದಾರೆ ಎನ್ನಲಾಗಿದೆ.