ಮುಂಬೈ (ಮಹಾರಾಷ್ಟ್ರ): ಪಾಲ್ಘರ್ ಜಿಲ್ಲೆಯ ವಿರಾರ್ನ ವಿಜಯ್ ವಲ್ಲಭ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತವೇನು ರಾಷ್ಟ್ರಮಟ್ಟದ ಸುದ್ದಿಯಲ್ಲ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ ಹೇಳಿಕೆ ನೀಡಿದ್ದಾರೆ.
ಘಟನೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಇಂದಿನ ಪ್ರಧಾನಿಯೊಂದಿಗಿನ ಸಭೆಯಲ್ಲಿ ನಾವು ರಾಜ್ಯಕ್ಕೆ ಸಾಕಷ್ಟು ಪ್ರಮಾಣದ ಲಸಿಕೆ, ಆಕ್ಸಿಜನ್, ರೆಮ್ಡೆಸಿವಿರ್ ಅಗತ್ಯದ ಬಗ್ಗೆ ಮಾತನಾಡುತ್ತೇವೆ. ವಿರಾರ್ ಬೆಂಕಿ ಅವಘಡ ಇದೇನು ರಾಷ್ಟ್ರೀಯ ಸುದ್ದಿಯಲ್ಲ. ಸಂತ್ರಸ್ತರಿಗೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಹೇಳಿದ್ದಾರೆ.
ಹೆಚ್ಚಿನ ಓದಿಗೆ: ಮಹಾರಾಷ್ಟ್ರದ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 13 ರೋಗಿಗಳು ಸಾವು
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಿರಾರ್ನ ವಿಜಯ್ ವಲ್ಲಭ್ ಆಸ್ಪತ್ರೆಯ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಬೆಂಕಿ ಕಾಣಿಸಿಕೊಂಡು 13 ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ.