ನವದೆಹಲಿ: ಬಾಂಗ್ಲಾ ಪ್ರಧಾನಿ ಹೆಚ್.ಇ.ಶೇಖ್ ಹಸೀನಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 26 ಮತ್ತು 27ರಂದು ಬಾಂಗ್ಲಾದೇಶಕ್ಕೆ ಭೇಟಿ ನೀಡಲಿದ್ದಾರೆ.
ಈ ಭೇಟಿ ಮೂರು ಹೊಸ ಯುಗ ಪ್ರಾರಂಭದ ಘಟನೆಗಳ ಸ್ಮರಣೆಗೆ ಸಂಬಂಧಿಸಿದೆ. ಶೇಖ್ ಮುಜಿಬುರ್ ರಹಮಾನ್ ಅವರ ಜನ್ಮ ಶತಮಾನೋತ್ಸವ, ಭಾರತ ಮತ್ತು ಬಾಂಗ್ಲಾದೇಶದ ನಡುವೆ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿ 50 ವರ್ಷಗಳು ಮತ್ತು ಬಾಂಗ್ಲಾದೇಶದ ವಿಮೋಚನಾ ಯುದ್ಧಕ್ಕೆ 50 ವರ್ಷ. ಈ ಮೂರು ವಿಷಯಗಳ ಸಂಬಂಧ ಮೋದಿ ಬಾಂಗ್ಲಾಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ 2015ರಲ್ಲಿ ಕೊನೆಯ ಬಾರಿಗೆ ಬಾಂಗ್ಲಾದೇಶಕ್ಕೆ ಭೇಟಿ ನೀಡಿದ್ದರು.
ಇನ್ನು ಮೋದಿ ಮಾರ್ಚ್ 26ರಂದು ಬಾಂಗ್ಲಾದೇಶದ ರಾಷ್ಟ್ರೀಯ ದಿನದ ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿ ಶೇಖ್ ಹಸೀನಾ ಅವರೊಂದಿಗೆ ದ್ವಿಪಕ್ಷೀಯ ಸಮಾಲೋಚನೆ ನಡೆಸಲಿದ್ದಾರೆ.