ETV Bharat / bharat

ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದ ಶಶಿಕಲಾ ನಟರಾಜನ್​ - ಶಶಿಕಲಾ ನಟರಾಜನ್

ಬರೋಬ್ಬರಿ ನಾಲ್ಕು ವರ್ಷಗಳ ಜೈಲುವಾಸದ ಬಳಿಕ ತಮಿಳುನಾಡಿಗೆ ತೆರಳಿದ್ದ ಶಶಿಕಲಾ ನಟರಾಜನ್​ ಇದೀಗ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ.

Sasikala
Sasikala
author img

By

Published : Mar 3, 2021, 9:47 PM IST

Updated : Mar 3, 2021, 10:00 PM IST

ಚೆನ್ನೈ (ತಮಿಳುನಾಡು): ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ ಆಪ್ತೆ ವಿ. ಶಶಿಕಲಾ ನಟರಾಜನ್​ ರಾಜಕೀಯ ಜೀವನಕ್ಕೆ ವಿದಾಯ ಘೋಷಣೆ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ ಪ್ರಕಟಣೆ ಹೊರಡಿಸಿದ್ದಾರೆ.

VK Sasikala quits politics
ರಾಜಕಾರಣದಿಂದ ಶಶಿಕಲಾ ನಟರಾಜನ್ ನಿವೃತ್ತಿ

ಎಐಎಡಿಎಂಕೆ ಕಾರ್ಯಕರ್ತರು ಒಟ್ಟಾಗಿದ್ದು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷವನ್ನು ಸೋಲಿಸುವಂತೆ ಅವರು ಇದೇ ವೇಳೆ ಕರೆ ಕೊಟ್ಟಿದ್ದಾರೆ.

ಶಶಿಕಲಾ ನಟರಾಜನ್​ ಅವರನ್ನು ಈಗಾಗಲೇ ಎಐಎಡಿಎಂಕೆ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದ್ದು, ಇದರ ಬೆನ್ನಲ್ಲೇ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಇವರು ಸುಮಾರು ನಾಲ್ಕು ವರ್ಷಗಳ ಬಳಿಕ ಬಿಡುಗಡೆ ಹೊಂದಿದ್ದರು. ತಮಿಳುನಾಡು ವಿಧಾನಸಭೆ ಚುನಾವಣೆ ಈಗಾಗಲೇ ಘೋಷಣೆಯಾಗಿದ್ದು, ಇದರ ಬೆನ್ನಲ್ಲೇ ಶಶಿಕಲಾ ನಟರಾಜನ್ ತೆಗೆದುಕೊಂಡಿರುವ ನಿರ್ಧಾರ ಎಲ್ಲರ ಅಚ್ಚರಿಗೆ ಕಾರಣವಾಗಿದೆ.

  • Tamil Nadu: In a statement, VK Sasikala says she is quitting public life; asks the AIADMK cadre to stand united and ensure DMK is defeated in forthcoming Assemlby elections.

    (file photo) pic.twitter.com/qEXfWLkXhq

    — ANI (@ANI) March 3, 2021 " class="align-text-top noRightClick twitterSection" data=" ">

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ವರ್ಷಗಳ ಕಾಲ ಶಿಕ್ಷೆ ಅನುಭವಿಸಿ, ತಮಿಳುನಾಡಿಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ಅಲ್ಲಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರಕ್ಕೆ ಕಾರಣವಾಗಲಿದ್ದಾರೆ ಎಂಬ ಮಾಹಿತಿ ಹರಿದಾಡಿತ್ತು. ಆದರೆ ಇದರ ಬೆನ್ನಲ್ಲೇ ಅವರು ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುತ್ತಿರುವುದಾಗಿ ಹೇಳಿದ್ದಾರೆ. ನನಗೆ ಯಾವುದೇ ರೀತಿಯ ರಾಜಕೀಯ ಹುದ್ದೆ ಹಾಗೂ ಸ್ಥಾನಮಾನಗಳ ಬಗ್ಗೆ ಆಸಕ್ತಿ ಇಲ್ಲ ಎಂದು ಅವರು ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Last Updated : Mar 3, 2021, 10:00 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.