ವಾರಂಗಲ್(ತೆಲಂಗಾಣ): ವಿವಾಹಿತ ಮಹಿಳೆಯ ಜೊತೆ ಅಕ್ರಮ ಸಂಬಂಧ ಹೊಂದಿರುವ ಗಂಭೀರ ಆರೋಪದ ಮೇಲೆ ವನಪರ್ತಿ ಜಿಲ್ಲೆಯ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿದ್ದಾರೆ.
ನವೆಂಬರ್ 18ರಂದು ವಿವಾಹಿತೆಯ ಜೊತೆ ತನ್ನ ನಿವಾಸದಲ್ಲಿದ್ದ ವೇಳೆ ಎಸ್‌ಐ ಸಿಕ್ಕಿಬಿದ್ದಿದ್ದರು. ಈ ವೇಳೆ ಸಬ್ ಇನ್ಸ್ಪೆಕ್ಟರ್ಗೆ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದಾದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಶಫಿ, ಪೆಬ್ಬೇರ್ನಲ್ಲಿ ಎಸ್‌ಐ ಆಗಿ ಕೆಲಸ ಮಾಡ್ತಿದ್ದಾಗ ಮಹಿಳೆ ಜೊತೆ ಸಂಪರ್ಕ ಬೆಳೆಸಿದ್ದರು. ಇದಾದ ಬಳಿಕ ನಿರಂತರವಾಗಿ ಆಕೆ ಜೊತೆ ಫೋನ್ನಲ್ಲಿ ಮಾತನಾಡುತ್ತಿದ್ದರು.
ಮಹಿಳೆಯ ಗಂಡ ಕೆಲಸಕ್ಕಾಗಿ ಮನೆಯಿಂದ ಹೊರಗಡೆ ಹೋದ ಬಳಿಕ ಆಕೆ ವಾಸವಾಗಿದ್ದ ಮನೆಗೆ ಮೇಲಿಂದ ಮೇಲೆ ಭೇಟಿ ನೀಡುತ್ತಿದ್ದ ಎಸ್ಐಗೆ ಸ್ಥಳೀಯರು ಎಚ್ಚರಿಕೆ ಸಹ ನೀಡಿದ್ದರು. ಆದರೆ ಆತ ತನ್ನ ಬುದ್ದಿ ಸರಿಪಡಿಸಿಕೊಂಡಿರಲಿಲ್ಲ. ಇದರ ಬೆನ್ನಲ್ಲೇ ಸುದ್ದಿ ಗಂಡನಿಗೆ ಗೊತ್ತಾಗಿದೆ. ನವೆಂಬರ್ 18ರಂದು ತಾನು ಊರಿನಿಂದ ಹೊರಗೆ ಹೋಗುತ್ತಿರುವುದಾಗಿ ತಿಳಿಸಿದ್ದಾನೆ. ಅದರಂತೆ ಮನೆಯಿಂದ ಹೊರಗಡೆ ಹೋಗುತ್ತಿದ್ದಂತೆ ಪೊಲೀಸ್ ಸಬ್ಇನ್ಸ್ಪೆಕ್ಟರ್ ಅಲ್ಲಿಗೆ ಬಂದಿದ್ದು, ಈ ವೇಳೆ ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ. ಜೊತೆಗೆ, ಮೇಲಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಭಾರತದಲ್ಲಿ ಬೀದಿನಾಯಿ, ಬೆಕ್ಕುಗಳೆಷ್ಟಿರಬಹುದು? ಇಲ್ಲಿದೆ ನೋಡಿ ಲೆಕ್ಕ
ಮಹಿಳೆಯ ಪತಿ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡುತ್ತಿದ್ದಂತೆ ನವೆಂಬರ್ 19ರಂದು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದ್ದು, ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.