ಮಸ್ಸೂರಿ: ಕಳೆದ ಕೆಲದಿನಗಳಿಂದ ಉತ್ತರಾಖಂಡ ಪರ್ವತ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದೆ. ನದಿಗಳ ನೀರಿನ ಮಟ್ಟವೂ ಗಣನೀಯವಾಗಿ ಹೆಚ್ಚಾಗಿದೆ. ಅಲ್ಲದೇ, ಕೆಂಪ್ಟಿ ಜಲಪಾತದ ನೀರಿನ ಮಟ್ಟ ಕೂಡ ಇದ್ದಕ್ಕಿದ್ದಂತೆ ಹೆಚ್ಚಾಗಿದ್ದು, ಭೋರ್ಗರೆಯುತ್ತಿರುವ ಜಲಪಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಗರಿಷ್ಠ ಮಟ್ಟವನ್ನೂ ಮೀರಿ ಜಲಪಾತ ಮೈದುಂಬಿ ಹರಿಯುತ್ತಿರುವ ಹಿನ್ನೆಲೆ ಸ್ಥಳದಲ್ಲೇ ಪೊಲೀಸರ ತಂಡ ಬಿಡು ಬಿಟ್ಟಿದ್ದು, ಜನರ ಪ್ರವೇಶವನ್ನು ನಿಷೇಧಿಸಿದೆ. ಅಲ್ಲದೇ, ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳಿಯ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ.
ಹವಾಮಾನ ಇಲಾಖೆಯ ಪ್ರಕಾರ, ಮುಸ್ಸೋರಿಯಲ್ಲಿ ಮುಂಜಾನೆಯಿಂದ ಮಳೆಯಾಗುತ್ತಿದ್ದು, ಮಂಜು ಕವಿದ ವಾತಾವರಣ ಸೃಷ್ಟಿಯಾಗಿದೆ. ಅತೀ ಮಳೆಯಿಂದಾಗಿ, ತಾಪಮಾನ ಕಡಿಮೆಯಾಗಿದೆ. ಇದರಿಂದಾಗಿ ಸ್ಥಳೀಯರು ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.