ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯಪಾಲ ಜಗದೀಪ್ ಧಂಕರ್ ಅವರು ಇಂದು ಮಧ್ಯಾಹ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಭೆ ನಡೆಸಲು ನವದೆಹಲಿಗೆ ಆಗಮಿಸಿದ್ದಾರೆ.
"ರಾಜ್ಯಪಾಲರು ರಾಜ್ಯದ ಆಡಳಿತ ಮತ್ತು ಇತರ ವಿಚಾರಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಕೇಂದ್ರ ಗೃಹ ಸಚಿವರೊಂದಿಗೆ ಚರ್ಚೆ ನಡೆಸುವುದು ಸಾಮಾನ್ಯವಾಗಿದೆ." ಎಂದು ತಮ್ಮ ದೆಹಲಿ ಭೇಟಿಯ ಬಗ್ಗೆ ಧಂಕರ್ ಹೇಳಿದ್ದಾರೆ.
ಅವರು ಇಂದು ಮಧ್ಯಾಹ್ನ 12.45 ಕ್ಕೆ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ. ಜನವರಿ 7 ರಂದು ಧಂಕರ್ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಪಶ್ಚಿಮ ಬಂಗಾಳದ ರಾಜ ಭವನದಲ್ಲಿ ಸಭೆ ನಡೆಸಿದ್ದರು. ಇದರ ಬಗ್ಗೆ ಪ್ರತಿಕ್ರಿಯಿಸಿದ ಅವರು, "ನಾನು ಮುಖ್ಯಮಂತ್ರಿಯೊಂದಿಗೆ ಸಭೆ ನಡೆಸಿದ್ದೇನೆ. ಇದು ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳ ನಡುವಿನ ಸಾಮಾನ್ಯ ಸಂವಾದವಾಗಿತ್ತು. ಇದು ಸಾರ್ವಜನಿಕ ಚರ್ಚೆಯ ವಿಷಯವೇ ಅಲ್ಲ." ಎಂದಿದ್ದಾರೆ.
ಪಶ್ಚಿಮ ಬಂಗಾಳದ 294 ವಿಧಾನಸಭಾ ಸ್ಥಾನಗಳಿಗೆ ಇದೇ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.