ETV Bharat / bharat

WB Panchayat polls: ಪಂಚಾಯತ್​ ಚುನಾವಣೆ: ಮತದಾನದ ವೇಳೆ ಹಿಂಸಾಚಾರ, 9 ಕಾರ್ಯಕರ್ತರ ಹತ್ಯೆ - West Bengal Panchayat polls

ಪಶ್ಚಿಮಬಂಗಾಳ ಪಂಚಾಯತ್​ ಚುನಾವಣೆಯಲ್ಲಿ ಹಿಂಸಾಚಾರ ಮುಂದುವರಿದಿದ್ದು, ಮೂವರು ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ ಎಂದು ಟಿಎಂಸಿ ಟ್ವೀಟ್​ ಮಾಡಿದೆ.

ಪಶ್ಚಿಮಬಂಗಾಳ ಪಂಚಾಯತ್​ ಚುನಾವಣೆ
ಪಶ್ಚಿಮಬಂಗಾಳ ಪಂಚಾಯತ್​ ಚುನಾವಣೆ
author img

By

Published : Jul 8, 2023, 9:15 AM IST

Updated : Jul 8, 2023, 2:21 PM IST

ಕೋಲ್ಕತ್ತಾ (ಪಶ್ಚಿಮ ಬಂಗಾಳ): ಬಿರುಸಿನ ತಿಕ್ಕಾಟಕ್ಕೆ ಕಾರಣವಾಗಿರುವ ಪಶ್ಚಿಮಬಂಗಾಳ ಗ್ರಾಮ ಪಂಚಾಯತ್​ ಚುನಾವಣೆಗೆ ಇಂದು ಬೆಳಗ್ಗೆ ಮತದಾನ ಆರಂಭವಾಗಿದ್ದು, ಕಟ್ಟುನಿಟ್ಟಿನ ಭದ್ರತೆಯ ನಡುವೆಯೂ ಕೆಲವೆಡೆ ಹಿಂಸಾಚಾರ ನಡೆದಿದೆ. ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ಮಧ್ಯೆ ಹೊಡೆದಾಟ ನಡೆದಿದ್ದು, ಮೂವರು ಟಿಎಂಸಿ ಕಾಯಕರ್ತರನ್ನು ಹತ್ಯೆ ಮಾಡಲಾಗಿದೆ ಎಂದು ಟಿಎಂಸಿ ಟ್ವೀಟ್​ ಮೂಲಕ ಆರೋಪಿಸಿದೆ. ಇನ್ನೊಂದೆಡೆ ಕೂಚ್‌ಬೆಹಾರ್‌ನ ಸೀತಾಯ್‌ನಲ್ಲಿರುವ ಬಾರವಿತಾ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆಯನ್ನು ಧ್ವಂಸಗೊಳಿಸಿ, ಮತಪತ್ರಗಳಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಚುನಾವಣೆಗೆ ನಾಮಪತ್ರ ಸಲ್ಲಿಕೆ ವೇಳೆ ರಾಜ್ಯದ ಹಲವೆಡೆ ತೀವ್ರ ಹಿಂಸಾಚಾರದ ಘಟನೆಗಳು ವರದಿಯಾಗಿದ್ದವು. ಇದಾದ ನಂತರವೂ ಮತದಾನ ದಿನವಾದ ಇಂದು ಕೂಡ ಅಂಥದ್ದೇ ಘಟನೆಗಳು ನಡೆದಿವೆ. ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು ಮುರ್ಷಿದಾಬಾದ್‌ನಲ್ಲಿ ಶುಕ್ರವಾರ ರಾತ್ರಿ ಟಿಎಂಸಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದು, ಮನೆಯೊಂದನ್ನು ಧ್ವಂಸ ಮಾಡಲಾಗಿದೆ.

  • Shocking and tragic incidents send shockwaves through the voting community.

    Three of our party workers have been murdered in Rejinagar, Tufanganj and Khargram and two have been left wounded from gunshots in Domkol.

    The @BJP4Bengal, @CPIM_WESTBENGAL and @INCWestBengal have been…

    — All India Trinamool Congress (@AITCofficial) July 8, 2023 " class="align-text-top noRightClick twitterSection" data=" ">

ಟಿಎಂಸಿ ಟ್ವೀಟ್​: 'ರೆಜಿನಗರ, ತುಫಂಗಂಜ್ ಮತ್ತು ಖಾರ್‌ಗ್ರಾಮ್‌ನಲ್ಲಿ ನಮ್ಮ ಪಕ್ಷದ ಮೂವರು ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಡೊಮ್‌ಕೋಲ್‌ನಲ್ಲಿ ಇಬ್ಬರು ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಬಿಜೆಪಿ, ಸಿಪಿಐ(ಎಂ) ಮತ್ತು ಕಾಂಗ್ರೆಸ್‌ ಪಕ್ಷಗಳು ಹಿಂಸಾಚಾರ ನಡೆಸುತ್ತಿವೆ. ಚುನಾವಣೆಯ ಹಿನ್ನೆಲೆ ಕೇಂದ್ರ ಪಡೆಗಳನ್ನು ರಾಜ್ಯದಲ್ಲಿ ನಿಯೋಜನೆ ಮಾಡಲಾಗಿದ್ದರೆ, ಅವುಗಳು ಈಗ ಎಲ್ಲಿವೆ' ಎಂದು ಪ್ರಶ್ನಿಸಿ ಟಿಎಂಸಿ ಅಧಿಕೃತ ಟ್ವಿಟರ್​ನಲ್ಲಿ ಪ್ರಶ್ನೆ ಮಾಡಲಾಗಿದೆ.

'ಕೇಂದ್ರ ಪಡೆಗಳ ಭದ್ರತೆ ಮಧ್ಯೆಯೂ ಸಾವಿನ ಸಂಖ್ಯೆ ಹೆಚ್ಚುತ್ತಿವೆ. ಮಾಲ್ಡಾದ ಮಾಣಿಕ್‌ಚಕ್‌ನಲ್ಲಿ ಬಾಂಬ್ ದಾಳಿಯ ನಡೆಸಲಾಗಿದೆ. ಇದು ನಮ್ಮ ಪಕ್ಷದ ಕಾರ್ಯಕರ್ತನನ್ನು ಬಲಿ ತೆಗೆದುಕೊಂಡಿದೆ. ನಾಡಿಯಾದ ನಾರಾಯಣಪುರ ಗ್ರಾಮ ಪಂಚಾಯತಿ ಅಭ್ಯರ್ಥಿ ಹಸೀನಾ ಸುಲ್ತಾನ್​ ಅವರ ಪತಿಯ ಮೇಲೆ ಗುಂಡು ಹಾರಿಸಲಾಗಿದೆ. ಮತದಾನ ಆರಂಭವಾಗುವ ಕೆಲವೇ ಕ್ಷಣಗಳ ಮೊದಲು ಕಚ್ಚಾ, ದೇಶಿ ನಿರ್ಮಿತ ಬಾಂಬ್‌ಗಳನ್ನು ನಮ್ಮ ಕಾರ್ಯಕರ್ತರ ಮೇಲೆ ಎಸೆಯಲಾಗಿದೆ' ಎಂದು ಟ್ವೀಟ್​​ನಲ್ಲಿ ಆರೋಪಿಸಲಾಗಿದೆ.

  • #WATCH | Polling booth at Baravita Primary School in Sitai, Coochbehar vandalised and ballot papers set on fire. Details awaited.

    Voting for Panchayat elections in West Bengal began at 7 am today. pic.twitter.com/m8ws7rX5uG

    — ANI (@ANI) July 8, 2023 " class="align-text-top noRightClick twitterSection" data=" ">

ಇನ್ನೊಂದೆಡೆ ಜಲ್ಪೈಗುರಿಯ ಸಲ್ಬರಿ ಗ್ರಾಮ ಪಂಚಾಯತ್‌ನಲ್ಲಿ ನಮ್ಮ ಕಾರ್ಯಕರ್ತ ಬಿಜೆಪಿಗರ ದಾಳಿಗೆ ತೀವ್ರವಾಗಿ ಗಾಯಗೊಂಡಿದ್ದಾರೆ. ಹಿಂಸಾಚಾರದ ಘಟನೆಗಳು ಕೇಂದ್ರ ಪಡೆಗಳ ಮೇಲೆಯೇ ಅನುಮಾನ ಮೂಡಿಸುತ್ತಿದೆ. ಬಿಜೆಪಿ, ಸಿಪಿಐ(ಎಂ) ಮತ್ತು ಕಾಂಗ್ರೆಸ್​ ಕಾರ್ಯಕರ್ತರು ಹಿಂಸಾಚಾರ ನಡೆಸುತ್ತಿದ್ದಾರೆ. ಶಾಂತಿಯುತ ಚುನಾವಣೆ ಹೇಳಿಕೆ ನೀಡಿದ ಪಕ್ಷಗಳು ಸುಳ್ಳು ಹೇಳಿವೆ ಎಂದು ಟಿಎಂಸಿ ದೂರಿದೆ.

ಹೊಡೆದಾಟದಲ್ಲಿ ಮನೆ ಧ್ವಂಸ: ಮತ್ತೊಂದು ಘಟನೆಯಲ್ಲಿ, ಬಿಜೆಪಿ ಅಭ್ಯರ್ಥಿಯ ಮನೆಯ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದಿನ್ಹಟಾದ ಬಮನ್‌ಹತ್ ಗ್ರಾಮ ಪಂಚಾಯತ್‌ನ ಕಲ್ಮಟಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸದ್ಯ ಗಾಯಾಳು ಕೂಚ್‌ಬೆಹಾರ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುರ್ಷಿದಾಬಾದ್ ಜಿಲ್ಲೆಯ ಶಂಶೇರ್‌ಗಂಜ್ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಟಿಎಂಸಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ. ಎರಡು ಪಕ್ಷಗಳ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದರಿಂದ ಮನೆಯೊಂದಕ್ಕೆ ತೀವ್ರ ಹಾನಿಯಾಗಿದೆ. ಸುದ್ದಿ ತಿಳಿದ ಸ್ಥಳೀಯ ಪೊಲೀಸ್ ಠಾಣೆಯ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದೆ. ಜುಲೈ 11 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: Manipur Violence: ಮಣಿಪುರ ಹಿಂಸಾಚಾರ: ಪೊಲೀಸ್​ ಕಮಾಂಡೋ ಸೇರಿ ನಾಲ್ವರ ಹತ್ಯೆ

Last Updated : Jul 8, 2023, 2:21 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.