ನವದೆಹಲಿ: ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೂರನೇ ಮತ್ತು ನಾಲ್ಕನೇ ಹಂತಕ್ಕೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಸುಮಾರು 80 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ ಮತ್ತು ಅವರ ಹೆಸರನ್ನು ಭಾನುವಾರ ಪ್ರಕಟಿಸಲಿದೆ ಎಂದು ಪಕ್ಷದ ಮುಖಂಡ ರಾಜೀಬ್ ಸಿಇಸಿ ಸಭೆಯ ನಂತರ ಹೇಳಿದ್ದಾರೆ.
ಸಭೆಯಲ್ಲಿ ನಾವು ಮುಖ್ಯವಾಗಿ ಮೂರನೇ ಮತ್ತು ನಾಲ್ಕನೇ ಹಂತದ ಬಗ್ಗೆ ಚರ್ಚೆ ನಡೆಸಿದ್ದೇವೆ. ಇದರಲ್ಲಿ ಸುಮಾರು 80 ಸ್ಥಾನಗಳನ್ನು ಅಂತಿಮಗೊಳಿಸಲಾಗಿದೆ ಎಂದರು.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 2021 ಕ್ಕೆ ಬಿಜೆಪಿ ಈಗಾಗಲೇ 58 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮೊದಲ ಪಟ್ಟಿಯಲ್ಲಿ ಪಕ್ಷವು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸುವೆಂದು ಅಧಿಕಾರಿಯನ್ನು ಕಣಕ್ಕಿಳಿಸಿದೆ.
294 ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಗೆ ಮಾರ್ಚ್ 27 ರಿಂದ ಏಪ್ರಿಲ್ 29 ರವರೆಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೇ 2 ರಂದು ಮತ ಏಣಿಕೆ ಕಾರ್ಯ ಜರುಗಲಿದೆ.