ಮಿಡ್ನಾಪೋರ್ (ಪಶ್ಚಿಮ ಬಂಗಾಳ): ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಡುವೆ ಪ್ರಬಲ ಸ್ಪರ್ಧೆ ಏರ್ಪಟ್ಟಿದೆ.
ಸತತ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಯಾರಿ ನಡೆಸುತ್ತಿದ್ದು, ಇತ್ತ ದೀದಿ ನಾಡಲ್ಲಿ ಬಿಜೆಪಿ ನಾಯಕರು ಭರ್ಜರಿ ಪ್ರಚಾರ ನಡೆಸುತ್ತಾ, ಭರವಸೆಗಳ ಮಳೆಯನ್ನೇ ಸುರಿಸುತ್ತಿದ್ದಾರೆ.
ಇದನ್ನೂ ಓದಿ: ಬಂಗಾಳ ಚುನಾವಣೆ ಹೊತ್ತಲ್ಲೇ ನಮೋ ಬಾಂಗ್ಲಾ ಪ್ರವಾಸ... ಪ್ರಧಾನ ಮೋದಿ ಚತುರ ನಡೆ!?
ಮಿಡ್ನಾಪೋರ್ ಜಿಲ್ಲೆಯ ಧೇರುವಾ ಗ್ರಾಮದಲ್ಲಿ ಹೊಲ ಸೇರಿದಂತೆ ಎಲ್ಲೆಂದರಲ್ಲಿ ಕೇಸರಿ ಧ್ವಜಗಳು ಕಂಡುಬಂದಿವೆ. ಕಮಲದ ಧ್ವಜಗಳಿಂದಲೇ ಗ್ರಾಮವನ್ನು ಅಲಂಕರಿಸಲಾಗಿದ್ದು, ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಸಹ ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ. ಇವುಗಳ ಮಧ್ಯೆ ಒಂದೊಂದು ಟಿಎಂಸಿ ಧ್ವಜಗಳೂ ಇವೆ.
ಪಶ್ಚಿಮ ಬಂಗಾಳದಲ್ಲಿ 294 ಕ್ಷೇತ್ರಗಳಿಗೆ ಮಾರ್ಚ್ 27 ರಿಂದ ಏಪ್ರಿಲ್ 29ರ ವರೆಗೆ ಎಂಟು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 2 ರಂದು ಫಲಿತಾಂಶ ಹೊರಬೀಳಲಿದೆ.