ಕೋಲ್ಕತ್ತಾ (ಪಶ್ಚಿಮ ಬಂಗಾಳ): ಮುಂಬರುವ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಹಾಗೂ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಇಂದು ಕಲಿಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಚುನಾವಣಾ ಸಮಿತಿ ಸಭೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಎಂಟು ಹಂತದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಮಾರ್ಚ್ 27 ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಮೇ 2 ರಂದು ಫಲಿತಾಂಶ ಹೊರ ಬೀಳಲಿದೆ. ಟಿಎಂಸಿ, ಬಿಜೆಪಿ ಹಾಗೂ ಎಡಪಕ್ಷಗಳ ಮೈತ್ರಿಯೊಂದಿಗೆ ಕಾಂಗ್ರೆಸ್ ಚುನಾವಣಾ ಕಣದಲ್ಲಿದ್ದು, ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಇದನ್ನೂ ಓದಿ: ಇಂಧನ ಬೆಲೆ ಏರಿಕೆಗೆ ಆಕ್ರೋಶ.. ಮಹಾರಾಷ್ಟ್ರ ಅಧಿವೇಶನಕ್ಕೆ ಸೈಕಲ್ ಏರಿ ಬಂದ ಶಿವಸೇನೆ ನಾಯಕರು..
ಮಮತಾ ಬ್ಯಾನರ್ಜಿ ಸತತ ಮೂರನೇ ಬಾರಿ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಲು ಹರಸಾಹಸ ಪಡುತ್ತಿದ್ದು, 294 ಸ್ಥಾನಗಳ ಪೈಕಿ 200 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಬಿಜೆಪಿ ಹೊಂದಿದೆ.