ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿನ ವಾಯು ಮಾಲಿನ್ಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಕೈಗಾರಿಕೆಗಳು ಹಾಗೂ ವಾಹನಗಳಿಂದಾಗುತ್ತಿರುವ ಮಾಲಿನ್ಯವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ನೀವು ನಮ್ಮ ಭುಜಕ್ಕೆ ಗುಂಡು ಹಾರಿಸಲು ಸಾಧ್ಯವಿಲ್ಲ. ಶಾಲೆಗಳನ್ನು ಏಕೆ ತೆರೆದಿದ್ದೀರಿ ಎಂದು ಅಲ್ಲಿನ ಸರ್ಕಾರವನ್ನು ಪ್ರಶ್ನಿಸಿದೆ.
ದೊಡ್ಡವರಿಗೆ ವರ್ಕ್ ಫ್ರಮ್ ಹೋಮ್ ಜಾರಿಗೊಳಿಸಿರುವಾಗ ಮಕ್ಕಳನ್ನು ಯಾಕೆ ಶಾಲೆಗೆ ಹೋಗಲು ಒತ್ತಾಯಿಸಲಾಗುತ್ತಿದೆ ಎಂದು ಕೋರ್ಟ್ ದೆಹಲಿ ಸರ್ಕಾರವನ್ನು ಕೇಳಿದೆ. ವಾಯು ಮಾಲಿನ್ಯ ನಿಯಂತ್ರಣ ಕ್ರಮಗಳ ಅನುಷ್ಠಾನಕ್ಕೆ ಗಂಭೀರ ಯೋಜನೆ ರೂಪಿಸಲು ಕೇಂದ್ರ ಹಾಗೂ ಸ್ಥಳೀಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ 24 ಗಂಟೆಗಳ ಗಡುವು ನೀಡಿದೆ. ಮಾಲಿನ್ಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸರ್ಕಾರಗಳು ವಿಫಲವಾದರೆ ನ್ಯಾಯಾಲಯವೇ ಆದೇಶ ನೀಡಲಿದೆ ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ.
ಕೇಂದ್ರ ಸರ್ಕಾರದ ಪರ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ನಿಯಮಗಳನ್ನು ಪಾಲಿಸದ ಕೈಗಾರಿಕೆಗಳನ್ನು ಮುಚ್ಚಲಾಗಿದೆ. ಸೂಕ್ತ ಕ್ರಮಕ್ಕೆ ಸಂಬಂಧಪಟ್ಟ ರಾಜ್ಯ ಸರ್ಕಾರಗಳಿಗೆ ತಿಳಿಸಲಾಗಿದೆ. ಜೆಟ್ ವೇಗದಲ್ಲಿ ಕೆಲಸಗಳು ನಡೆಯುತ್ತಿವೆ. ಅಧಿಕಾರಿಗಳು ಹಗಲಿರುಳು ಕೆಲಸ ಮಾಡುತ್ತಿದ್ದಾರೆ ಎಂದು ಸರ್ಕಾರದ ಕ್ರಮಗಳನ್ನು ವಿವರಿಸಿದರು.
ಕೇಂದ್ರ ಸರ್ಕಾರವನ್ನು ತರಾಟೆ
ದೆಹಲಿ-ಎನ್‌ಸಿಆರ್ ವಾಯುಮಾಲಿನ್ಯ ಬಗ್ಗೆ ವಾಯು ಗುಣಮಟ್ಟ ನಿರ್ವಹಣೆ ಆಯೋಗ ತುರ್ತು ವಿಧಾನಗಳಲ್ಲಿ ಕೆಲಸ ಮಾಡಬೇಕು ಕೋರ್ಟ್ ಹೇಳಿದೆ. ನಿಮ್ಮ ಅಧಿಕಾರಶಾಹಿಯಲ್ಲಿ ನಾವು ಸೃಜನಶೀಲತೆಯನ್ನು ಜಾರಿಗೊಳಿಸಲು ಅಥವಾ ತುಂಬಲು ಸಾಧ್ಯವಿಲ್ಲ. ಇದೇ ವೇಳೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ನ್ಯಾಯಾಲಯ, ನೀವು ಕೈಗೊಂಡಿರುವ ಕೆಲವು ಕ್ರಮಗಳೊಂದಿಗೆ ಬರಬೇಕು ಸೂಚಿಸಿ ವಿಚಾರಣೆಯನ್ನು ನಾಳೆ ಬೆಳಗ್ಗೆ 10 ಗಂಟೆಗೆ ಮುಂದೂಡಿತು.
ಇದನ್ನೂ ಓದಿ: 2022ರ ಜನವರಿ 18ರಿಂದ ವಿಜಯ್ ಮಲ್ಯ ಪ್ರಕರಣಗಳ ವಿಚಾರಣೆ ; ಸುಪ್ರೀಂಕೋರ್ಟ್