ನವದೆಹಲಿ: 12 ಮಂದಿ ರಾಜ್ಯಸಭಾ ಸದಸ್ಯರ ಅಮಾನತು ವಾಪಸ್‌ಗೆ ಆಗ್ರಹಿಸಿ ಕಳೆದ ಹಲವು ದಿನಗಳಿಂದ ಸಂಸತ್ ಭವನದ ಹೊರಗಡೆ ಪ್ರತಿಭಟನೆ ಮಾಡುತ್ತಿದ್ದ ವಿಪಕ್ಷಗಳು ಇಂದು ಯಾವುದೇ ರೀತಿಯ ಪ್ರತಿಭಟನೆ ಮಾಡುವುದಿಲ್ಲ ಎಂದು ಹೇಳಿವೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೂನೂರು ಬಳಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಸೇರಿ 13 ಮಂದಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಗೌರವಾರ್ಥ ಹಾಗೂ ಶ್ರದ್ಧಾಂಜಲಿ ಸಲ್ಲಿಸುವ ಹಿನ್ನೆಲೆಯಲ್ಲಿ 12 ಸದಸ್ಯರ ಅಮಾನತು ನಿರ್ಧಾರದ ವಿರುದ್ಧ ಇಂದು ನಾವು ಪ್ರತಿಭಟನೆ ಮಾಡುತ್ತಿಲ್ಲ ಎಂದು ತಿಳಿಸಿದರು.
ನವೆಂಬರ್ 29ರಿಂದ ಅಧಿವೇಶನದ ದಿನಗಳಂದು ವಿಪಕ್ಷಗಳು ಎರಡೂ ಸದನಗಳೊಳಗೆ ಹಾಗೂ ಹೊರಗಡೆ ಪ್ರತಿಭಟನೆ ಮಾಡುತ್ತಲೇ ಬಂದಿವೆ.
ಇದನ್ನೂ ಓದಿ: ಹೆಲಿಕಾಪ್ಟರ್ ದುರಂತದಲ್ಲಿ ಮಡಿದವರಿಗೆ ಸಂಸತ್ತಿನ ಉಭಯ ಸದನದಲ್ಲಿ ಸಂತಾಪ; ಉನ್ನತ ಮಟ್ಟದ ತನಿಖೆಗೆ ಆದೇಶ