ನವದೆಹಲಿ: ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಕೇರಳ, ದೆಹಲಿ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಹೆಚ್ಚಿನ ಕೋವಿಡ್ ಪ್ರಕರಣಗಳು ದಾಖಲಾಗುತ್ತಿರುವುದು ಕಳವಳಿಕಾರಿಯಾಗಿದ್ದು, ಈ ರಾಜ್ಯಗಳಿಗೆ ಕೇಂದ್ರದಿಂದ ಆರೋಗ್ಯ ತಂಡಗಳನ್ನು ಕಳುಹಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.
ದೆಹಲಿಯಲ್ಲಿಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಆರು ರಾಜ್ಯಗಳಲ್ಲಿ ಕೇಂದ್ರ ತಂಡಗಳು ನಿರಂತರವಾಗಿ ಪರಿಸ್ಥಿತಿಯನ್ನು ಪರಿಶೀಲನೆ ಮಾಡಲಿವೆ ಎಂದು ಹೇಳಿದ್ದಾರೆ.
ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಕೇರಳ, ಉತ್ತರ ಪ್ರದೇಶ, ದೆಹಲಿ, ಪಶ್ಚಿಮ ಬಂಗಾಳ, ಗುಜರಾತ್, ಒಡಿಶಾ ಹಾಗೂ ರಾಜಸ್ಥಾನ ಅಗ್ರ 10 ರಾಜ್ಯಗಳಾಗಿವೆ. ದೇಶದಲ್ಲಿ ಈವರೆಗೆ 15 ರಿಂದ 18 ವರ್ಷದೊಳಗಿನ ಶೇ.52ರಷ್ಟು ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ