ನವದೆಹಲಿ: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ 2021ನೇ ಸಾಲಿನ ಸಿಬಿಎಸ್‌ಇ 10ನೇ ತರಗತಿ ಫಲಿತಾಂಶವನ್ನು ಮುಂದಿನ ವಾರ ಪ್ರಕಟಿಸುವುದಾಗಿ ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕ ಸನ್ಯಂ ಭಾರದ್ವಾಜ್ ಹೇಳಿದ್ದಾರೆ.
10ನೇ ತರಗತಿ ಫಲಿತಾಂಶ ಪ್ರಕಟಿಸುವ ಸಂಬಂಧ ಇಂದಿನಿಂದ ಕೆಲಸ ಆರಂಭವಾಗಿದೆ. ಮುಂದಿನ ವಾರ ರಿಸಲ್ಟ್ ನೀಡಲು ಪ್ರಯತ್ನಿಸಲಾಗುವುದು. ಮಂಡಳಿಯು ಒಂದಕ್ಕಿಂತ ಹೆಚ್ಚು ಪರೀಕ್ಷೆಗಳನ್ನು ನಡೆಸುವ ವಿಭಿನ್ನ ಕಾರ್ಯವಿಧಾನದ ಯೋಜನೆಯನ್ನು ರಚಿಸುವ ಬಗ್ಗೆಯೂ ಅವರು ಸುಳಿವು ನೀಡಿದರು.
ಇದನ್ನೂ ಓದಿ: CBSE class 12 results: ಶೇ 99ರಷ್ಟು ವಿದ್ಯಾರ್ಥಿಗಳು ಪಾಸ್; ಈ ವರ್ಷ ಮೆರಿಟ್ ಲಿಸ್ಟ್ ಇಲ್ಲ
ನಾವು ಒಂದಕ್ಕಿಂತ ಹೆಚ್ಚು ಪರೀಕ್ಷೆಗಳನ್ನು ನಡೆಸುವ ಯೋಜನೆ ರಚಿಸಿದ್ದೇವೆ. ಆ ಸಂಖ್ಯೆಗಳ ಆಧಾರದ ಮೇಲೆ, ಭವಿಷ್ಯದಲ್ಲಿ ಯಾವುದೇ ಸಾಂಕ್ರಾಮಿಕ ರೀತಿಯ ಪರಿಸ್ಥಿತಿಯ ಸಂದರ್ಭದಲ್ಲಿ ನಾವು ಪರೀಕ್ಷೆಯ ಫಲಿತಾಂಶಗಳನ್ನು ಸರಿಯಾದ ಸಮಯಕ್ಕೆ ನೀಡಲು ಸಾಧ್ಯವಾಗುತ್ತದೆ ಎಂದು ಭರದ್ವಾಜ್ ಹೇಳಿದರು.
ವಿಶೇಷವೆಂದರೆ, ಕೋವಿಡ್ ಸಾಂಕ್ರಾಮಿಕ ರೋಗದ 2ನೇ ಅಲೆಯಿಂದಾಗಿ 2021ನೇ ಸಾಲಿನ ಸಿಬಿಎಸ್‌ಇ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಸಿಬಿಎಸ್ಇ ಪರ್ಯಾಯ ಮೌಲ್ಯಮಾಪನ ಮಾನದಂಡಗಳನ್ನು ರೂಪಿಸಿದ್ದು, ಇದರ ಆಧಾರದ ಮೇಲೆ ಫಲಿತಾಂಶಗಳನ್ನು ಸಿದ್ಧಪಡಿಸಲಾಗಿದೆ.