ನವದೆಹಲಿ: ಕೋವಿಡ್- 19 ಸಾಂಕ್ರಾಮಿಕ ಪಿಡುಗಿನ ಸಮಯದಲ್ಲಿ ಖಾಸಗಿ ವಾಹನದಲ್ಲಿ ಏಕಾಂಗಿಯಾಗಿ ಪ್ರಯಾಣಿಸುವಾಗಲೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಖಾಸಗಿ ವಾಹನ ಓಡಿಸುವಾಗ ಮಾಸ್ಕ್ ಕಡ್ಡಾಯವಾಗಿ ಧರಿಸುವಂತೆ ಹಾಗೂ ನಿಯಮಗಳನ್ನು ಉಲ್ಲಂಘಿಸಿದವರಿಗೆ ದಂಡ ವಿಧಿಸುವ ನಿಯಮವನ್ನು ಜಾರಿಗೆ ತಂದಿದ್ದ ದೆಹಲಿ ಸರ್ಕಾರದ ನಿಲುವನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್ ಅವರಿದ್ದ ಪೀಠ, ಸರ್ಕಾರದ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿ, ಅರ್ಜಿ ತಿರಸ್ಕರಿಸಿತು.
ಕೊರೊನಾ ಸಾಂಕ್ರಾಮಿಕ ಪಿಡುಗಿನ ಸಮಯದಲ್ಲಿ ಮಾಸ್ಕ್ ಧರಿಸುವುದು 'ಸುರಕ್ಷಾ ಕವಚ' ದಂತೆ ಎಂದು ನ್ಯಾಯಾಲಯ ತಿಳಿಸಿದೆ.
ಓದಿ: ಕೋವಿ ಹಿಡಿದರೂ ಕರುಣೆ ಮರೆಯದ ಭಾರತೀಯ ಸೈನಿಕರು.. LOC ದಾಟಿ ಬಂದವನನ್ನ ಮರಳಿ ಕಳುಹಿಸಿದರು..