ನವದೆಹಲಿ: ಪೆಗಾಸಸ್ ಮುಂಗಾರು ಅಧಿವೇಶನದ ಮೇಲೆ ಪರಿಣಾಮ ಬೀರಿದೆ ಎಂದು ನಾವು ಮೊದಲಿನಿಂದಲೂ ಹೇಳುತ್ತಿದ್ದೆವು. ಪ್ರತಿಪಕ್ಷಗಳು ಸಂಸತ್ತಿನ ಕಾರ್ಯ ನಿರ್ವಹಣೆಗೆ ಅವಕಾಶ ನೀಡುತ್ತಿಲ್ಲ ಎಂದು ಆಡಳಿತ ಪಕ್ಷ ಹೇಳಿತ್ತು. ಆದರೆ ಸತ್ಯ ಹೊರಬರಬೇಕಿದೆ. ನಾವು ಈ ವಿಷಯವನ್ನು ಸಂಸತ್ನ ಉಭಯ ಸದನಗಳಲ್ಲಿ ಪ್ರಸ್ತಾಪಿಸುತ್ತೇವೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ನಾಳೆ ಬಜೆಟ್ ಮಂಡನೆಯಾಗಲಿದೆ. ಸಂಸತ್ನಲ್ಲಿ ಎಲ್ಲ ವಿಷಯಗಳ ಬಗ್ಗೆ ಚರ್ಚೆಗೆ ನಾವು ಸಿದ್ಧರಿದ್ದೇವೆ. ಆದರೆ ಈಗಾಗಲೇ ಇರುವ ಹೊಸ ಸಮಸ್ಯೆಗಳು ಹಣದುಬ್ಬರ, ನಿರುದ್ಯೋಗ, ರೈತರ ಸಮಸ್ಯೆ, ಮಹಿಳೆಯರು ಮತ್ತು ದಲಿತರ ಮೇಲಿನ ಅಪರಾಧಗಳು ವಿಚಾರಗಳ ಕುರಿತು ಕಾಲಕಾಲಕ್ಕೆ ಪ್ರಸ್ತಾಪಿಸಲಾಗುವುದು ಎಂದು ಮಲ್ಲಿಕಾರ್ಜುನ ಖರ್ಗೆ ಇದೇ ವೇಳೆ ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಇಂದಿನಿಂದ ಬಜೆಟ್ ಅಧಿವೇಶನ ಆರಂಭ: ಎಲ್ಲರಿಗೂ ಸ್ವಾಗತ ಕೋರಿದ ಪಿಎಂ ಮೋದಿ