ETV Bharat / bharat

ಮಣಿಪುರ ಸಂಘರ್ಷ ಕೊನೆಗೊಳಿಸುವಂತೆ ಪ್ರಧಾನಿ ಮೋದಿಗೆ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಮನವಿ

ಮಣಿಪುರ ಸಂಘರ್ಷವನ್ನು ಪರಿಹರಿಸುವಂತೆ ಒಲಿಂಪಿಕ್ ಬೆಳ್ಳಿ ಪದಕ ವಿಜೇತ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಡಿಯೋ ಮೂಲಕ ವಿನಂತಿ ಮಾಡಿದ್ದಾರೆ.

appeals to Modi to end Manipur conflict
Weightlifter Mirabai Chanu
author img

By

Published : Jul 18, 2023, 9:21 AM IST

Updated : Jul 18, 2023, 9:48 AM IST

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಆದಷ್ಟು ಬೇಗ ಕೊನೆಗೊಳಿಸುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒಲಿಂಪಿಕ್ ಸಾಧಕಿ ಮೀರಾಬಾಯಿ ಚಾನು ಅವರು ಸೋಮವಾರ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.

"ಮುಂಬರುವ ವಿಶ್ವ ಚಾಂಪಿಯನ್‌ಶಿಪ್ ಮತ್ತು ಏಷ್ಯನ್ ಗೇಮ್ಸ್‌ಗೆ ತಯಾರಿಗೆ ನಾನು ಪ್ರಸ್ತುತ ಅಮೆರಿಕದಲ್ಲಿ ತರಬೇತಿ ಪಡೆಯುತ್ತಿದ್ದೇನೆ. ಮಣಿಪುರ ನನ್ನ ತವರು ರಾಜ್ಯ. ಅಲ್ಲಿ ನನ್ನ ಮನೆ ಇದೆ. ಈ ಸಂಘರ್ಷ ಯಾವಾಗ ಕೊನೆಗೊಳ್ಳುತ್ತದೆ ಎಂದು ಯಾವಾಗಲೂ ಪರಿತಪಿಸುತ್ತಿದ್ದೇನೆ. ಹಿಂಸಾಚಾರಗಳಿಂದಾಗಿ ಈಶಾನ್ಯ ರಾಜ್ಯದ ಕ್ರೀಡಾಪಟುಗಳಿಗೆ ತರಬೇತಿ ಪಡೆದುಕೊಳ್ಳಲು ತೊಂದರೆಯಾಗುತ್ತಿದೆ. ವಿದ್ಯಾರ್ಥಿಗಳ ಅಧ್ಯಯನಕ್ಕೂ ತೊಡಕಾಗಿದೆ. ಹಾಗಾಗಿ ಶೀಘ್ರವಾಗಿ ಸಮಸ್ಯೆಯನ್ನು ಬಗೆಹರಿಸಬೇಕು. ಸಂಘರ್ಷ ಶುರುವಾಗಿ ಮೂರು ತಿಂಗಳು ಪೂರ್ಣಗೊಳ್ಳುತ್ತಾ ಬರುತ್ತಿದ್ದರೂ ಶಾಂತಿ ಇನ್ನೂ ನೆಲೆಸಿಲ್ಲ. ಅನೇಕರು ಜೀವ ಕಳೆದುಕೊಂಡಿದ್ದಾರೆ. ಹಲವಾರು ಮನೆಗಳು ಸುಟ್ಟುಹೋಗಿವೆ. ನಾನು ರಾಜ್ಯದಿಂದ ದೂರವಿದ್ದರೂ ತವರು ರಾಜ್ಯವನ್ನು ಈ ಪರಿಸ್ಥಿತಿಯಲ್ಲಿ ನೋಡಲು ಸಾಧ್ಯವಾಗದು. ಹಾಗಾಗಿ, ಮೊದಲಿದ್ದ ಶಾಂತಿಯನ್ನು ಮರಳಿ ತರುವಂತೆ ಪ್ರಧಾನಿ ಮತ್ತು ಗೃಹ ಸಚಿವರಿಗೆ ಮನವಿ ಮಾಡುತ್ತಿದ್ದೇನೆ"ಎಂದು ಹೇಳಿದ್ದಾರೆ.

ಮಣಿಪುರದಲ್ಲಿ ಕಳೆದ ಮೇ 3ರಿಂದ ಎರಡು ಸಮುದಾಯಗಳಾದ ಮೈಥೇಯಿ ಮತ್ತು ಕುಕಿಗಳ ನಡುವೆ ಜನಾಂಗೀಯ ಘರ್ಷಣೆ ನಡೆಯುತ್ತಿದೆ. 150ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈಥೇಯಿ ಸಮುದಾಯ ಬೇಡಿಕೆಯಿಟ್ಟು ಬೆಟ್ಟದ ಜಿಲ್ಲೆಗಳಲ್ಲಿ 'ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ' ಆಯೋಜಿಸಿತ್ತು. ನಂತರ ಶುರುವಾದ ಗಲಭೆ ಇನ್ನೂ ತಣ್ಣಗಾಗಿಲ್ಲ. ಮಣಿಪುರದಲ್ಲಿ ಸುಮಾರು ಶೇ 53 ರಷ್ಟಿರುವ ಮೈಥೇಯಿ ಜನರು ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ. ನಾಗಾಗಳು ಮತ್ತು ಕುಕಿಗಳು ಸೇರಿದಂತೆ ಇತರೆ ಬುಡಕಟ್ಟು ಜನಾಂಗದವರು ಶೇ 40 ರಷ್ಟಿದ್ದು ಹೆಚ್ಚಾಗಿ ಗುಡ್ಡಗಾಡು ಜಿಲ್ಲೆಗಳಲ್ಲಿ ನೆಲೆಸಿದ್ದಾರೆ.

ಈ ಘಟನಾವಳಿಗಳು ರಾಜಕೀಯ ಪಕ್ಷಗಳ ಆರೋಪ- ಪ್ರತ್ಯಾರೋಪಗಳಿಗೂ ಕಾರಣವಾಗಿದೆ. ಕಾಂಗ್ರೆಸ್ ಪಕ್ಷವು​ ಈ ಗಲಭೆಗೆ ಕೇಂದ್ರದ ಬಿಜೆಪಿ ಸರ್ಕಾರದ ನಿರ್ಲಕ್ಷ್ಯವೇ ಕಾರಣವೆಂದು ದೂರುತ್ತಿದೆ. ತ್ವರಿತ ಕ್ರಮ ತೆಗೆದುಕೊಳ್ಳುವಲ್ಲಿ ಸರ್ಕಾರ ವಿಫಲಗೊಂಡಿದ್ದರಿಂದ ಇಷ್ಟೊಂದು ಜೀವ, ಮನೆ, ಆಸ್ತಿಗಳಿಗೆ ಹಾನಿಯಾಗಿದೆ ಎಂದು ಆರೋಪಿಸಿದೆ. ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್​ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಆದಷ್ಟು ಬೇಗ ಶಾಂತಿ ಪುನಃಸ್ಥಾಪಿಸಲು ಕೇಂದ್ರ ಪ್ರಯತ್ನಿಸುತ್ತಿದೆ. ಇದಕ್ಕಾಗಿ ಗೃಹ ಸಚಿವರು ಸರ್ವ ಪ್ರಯತ್ನಗಳನ್ನೂ ಮಾಡುತ್ತಿದ್ದಾರೆ. ನಾಗರಿಕ ಸಮಿತಿ ರಚಿಸಲಾಗಿದೆ. ಆದಷ್ಟು ಬೇಗ ಎಲ್ಲವೂ ನಿಯಂತ್ರಣಕ್ಕೆ ಬರಲಿದೆ ಎಂದಿದ್ದಾರೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ಪೊಲೀಸ್ ಸಿಬ್ಬಂದಿ ಹತ್ಯೆ, 10 ಮಂದಿಗೆ ಗಾಯ

Last Updated : Jul 18, 2023, 9:48 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.