ETV Bharat / bharat

ಪಂಚರಾಜ್ಯ ಫೈಟ್​​: ಬಂಗಾಳ, ಅಸ್ಸೋಂನಲ್ಲಿ ಮೊದಲ ಹಂತದ ಮತದಾನ - ಪಶ್ಚಿಮ ಬಂಗಾಳ ಮೊದಲ ಹಂತ

ಮಹಾಮಾರಿ ಕೊರೊನಾ ವೈರಸ್ ಹಾವಳಿ ನಡುವೆ ಬಹುನಿರೀಕ್ಷಿತ ಪಂಚರಾಜ್ಯ ಚುನಾವಣೆಗೆ ಇಂದಿನಿಂದ ಅಧಿಕೃತ ಚಾಲನೆ ಸಿಗಲಿದ್ದು, ಮೊದಲ ಹಂತದಲ್ಲಿ ಪಶ್ಚಿಮ ಬಂಗಾಳ ಹಾಗೂ ಅಸ್ಸೋಂನಲ್ಲಿ ಮತದಾನವಾಗಲಿದೆ.

Assembly polls
Assembly polls
author img

By

Published : Mar 27, 2021, 2:22 AM IST

ಕೋಲ್ಕತ್ತಾ/ಗುವಾಹಟಿ: ಪಂಚರಾಜ್ಯ ವಿಧಾನಸಭೆ ಚುನಾವಣೆಗೆ ಇಂದಿನಿಂದ ಮುಹೂರ್ತ ಆರಂಭಗೊಂಡಿದ್ದು, ಈ ಪೈಕಿ ಮೊದಲ ಹಂತದಲ್ಲಿ ಬಂಗಾಳದ 30 ಕ್ಷೇತ್ರ ಹಾಗೂ ಅಸ್ಸೋಂನ 47 ಸ್ಥಾನಗಳಿಗೆ ಮೊದಲ ಹಂತದಲ್ಲಿ ಮತದಾನವಾಗಲಿದೆ.

ಎರಡು ರಾಜ್ಯಗಳಿಂದ 1.54 ಕೋಟಿ ಜನರು ತಮ್ಮ ಹಕ್ಕು ಚಲಾವಣೆ ಮಾಡಲಿದ್ದು, ಇದಕ್ಕಾಗಿ ಕೇಂದ್ರ ಚುನಾವಣಾ ಆಯೋಗ ಎಲ್ಲ ರೀತಿಯ ಸಿದ್ಧತೆ ಮಾಡಲಾಗಿದೆ. ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, ಕೋವಿಡ್ ಮಾರ್ಗಸೂಚಿ ಅನುಸರಣೆ ಮಾಡುವುದು ಕಡ್ಡಾಯವಾಗಿದೆ.

ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಸಿಬ್ಬಂದಿ

ಪಶ್ಚಿಮ ಬಂಗಾಳದ 30 ಕ್ಷೇತ್ರಗಳಲ್ಲಿ 91 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದು, 73 ಲಕ್ಷ ಮತದಾರರು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದು, ಅಸ್ಸೋಂನಲ್ಲಿ 81 ಲಕ್ಷ ಜನರು ಚುನಾವಣೆಗೆ ಸ್ಪರ್ಧೆ ಮಾಡಿರುವ 47 ಕ್ಷೇತ್ರದಿಂದ 23 ಮಹಿಳೆಯರು ಸೇರಿ 264 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.

ಇದನ್ನೂ ಓದಿ: ರೈತ ಮುಖಂಡರ ಬಂಧನಕ್ಕೆ ರಾಕೇಶ್ ಟಿಕಾಯತ್ ಖಂಡನೆ

ಪಶ್ಚಿನ ಬಂಗಾಳದಲ್ಲಿ 294 ಕ್ಷೇತ್ರಗಳಿಗೆ 8 ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಅಸ್ಸೋಂನ 126 ಸ್ಥಾನಗಳಿಗೆ ಮೂರು ಹಂತಗಳಲ್ಲಿ ಮತದಾನವಾಗಲಿದೆ. ಪ್ರಮುಖವಾಗಿ ಪಶ್ಚಿಮ ಬಂಗಾಳದ ಮಿಡ್ನಾಪೂರ್​, ಬಂಕಾಪೂರ್​, ಪುರಿಲಿಯಾ ಕ್ಷೇತ್ರ ಸೇರಿ ವಿವಿಧ ಜಿಲ್ಲೆಗಳಲ್ಲಿ ವೋಟಿಂಗ್​ ನಡೆಯಲಿದೆ. ಇಲ್ಲಿ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್​ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.

ಪಶ್ಚಿಮ ಬಂಗಾಳ ಹಾಗೂ ಅಸ್ಸೋಂನಲ್ಲಿ ಚುನಾವಣೆ ನಡೆಯುವ ಎಲ್ಲ ಕ್ಷೇತ್ರಗಳಲ್ಲೂ ಭಾರೀ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಪೊಲೀಸ್​ ಜೊತೆಗೆ ಕೇಂದ್ರೀಯ ಮೀಸಲು ಪಡೆ ಕೂಡ ನಿಯೋಜನೆ ಮಾಡಲಾಗಿದೆ. ಕೇರಳ, ತಮಿಳುನಾಡು, ಪುದುಚೇರಿಯಲ್ಲೂ ಮತದಾನ ನಡೆಯಲಿದ್ದು, ಮೇ 2ರಂದು ಫಲಿತಾಂಶ ಬಹಿರಂಗಗೊಳ್ಳಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.