ETV Bharat / bharat

ಟಿಎಂಸಿಗೆ ಪಶ್ಚಿಮ ಬಂಗಾಳ ಬಿಜೆಪಿ ಉಪಾಧ್ಯಕ್ಷ ಅರ್ಜುನ್ ಸಿಂಗ್ ಜಂಪ್!​?

ಈ ಮೊದಲು ಟಿಎಂಸಿಯಲ್ಲೇ ಇದ್ದ ಅರ್ಜುನ್​ ಸಿಂಗ್​ 2019ರಲ್ಲಿ ಬಿಜೆಪಿಗೆ ಸೇರಿದ್ದರು. ಇತ್ತೀಚಿಗೆ ಕೇಂದ್ರ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಟ್ಟಿದ್ದ ಬೆನ್ನಲ್ಲೇ ಈ ಬೆಳವಣಿಗೆ ನಡೆಯುತ್ತಿರುವುದು ಗಮನಾರ್ಹವಾಗಿದೆ..

West Bengal BJP vice-president Arjun Singh
ಪಶ್ಚಿಮ ಬಂಗಾಳ ಬಿಜೆಪಿ ಉಪಾಧ್ಯಕ್ಷ ಅರ್ಜುನ್ ಸಿಂಗ್
author img

By

Published : May 22, 2022, 3:30 PM IST

ಕೋಲ್ಕತ್ತಾ(ಪಶ್ಚಿಮಬಂಗಾಳ) : ಪಶ್ಚಿಮ ಬಂಗಾಳದ ಬಿಜೆಪಿ ಉಪಾಧ್ಯಕ್ಷ, ಸಂಸದ ಅರ್ಜುನ್ ಸಿಂಗ್ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ)ಗೆ ಸೇರಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ರಾಜ್ಯ ನಾಯಕತ್ವವನ್ನು ಅವರು ಟೀಕಿಸಿದ್ದ ಕೆಲವೇ ದಿನಗಳಲ್ಲಿ ಈ ಮಾತುಗಳು ಕೇಳಿ ಬರುತ್ತಿವೆ.

ಪಕ್ಷದಲ್ಲಿ ಉನ್ನತ ಸ್ಥಾನ ಹೊಂದಿದ್ದರೂ ತಮಗೆ ಕೆಲಸ ಮಾಡಲು ಸರಿಯಾಗಿ ಅವಕಾಶ ನೀಡುತ್ತಿಲ್ಲ ಎಂದು ಅರ್ಜುನ್​ ಸಿಂಗ್​ ಹೇಳಿಕೊಂಡಿದ್ದರು. ಅಲ್ಲದೇ, ಪ್ರತಿ ಕ್ವಿಂಟಾಲ್‌ ಸೆಣಬಿನ ಬೆಲೆಯನ್ನು 6,500 ರೂ.ಗೆ ಮಿತಿಗೊಳಿಸುವ ಅಧಿಸೂಚನೆಯನ್ನು ಕೇಂದ್ರ ಸರ್ಕಾರ​​ ಹಿಂತೆಗೆದುಕೊಳ್ಳುವ ನಿರ್ಧಾರ ಬಗ್ಗೆಯೂ ಅವರು ಅತೃಪ್ತಿ ಹೊಂದಿದ್ದರು.

ನಾನು ಇತ್ತೀಚೆಗೆ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಪಕ್ಷದ ರಾಜ್ಯ ಘಟಕದ ಪರಿಸ್ಥಿತಿಯ ಬಗ್ಗೆ ಹೇಳಿದ್ದೇನೆ. ಪಕ್ಷದಲ್ಲಿ ಅರ್ಹ ಕಾರ್ಯಕರ್ತರಿಗೆ ಸರಿಯಾದ ಮನ್ನಣೆ ಸಿಗುತ್ತಿಲ್ಲ. ರಾಜ್ಯ ಉಪಾಧ್ಯಕ್ಷನಾಗಿರುವ ನನಗೂ ಸರಿಯಾಗಿ ಕೆಲಸ ಮಾಡಲು ಬಿಡುತ್ತಿಲ್ಲ ಎಂದು ಸಿಂಗ್ ಇತ್ತೀಚಿಗೆ ಹೇಳಿದ್ದರು.

ಇದೇ ವೇಳೆ ಬಿಜೆಪಿಯ ರಾಜ್ಯ ಘಟಕದಲ್ಲಿನ ಬಣ ಜಗಳ ಹಾಗೂ ಸೆಣಬು ಮಿಲ್​​ಗಳ ವಿಷಯವಾಗಿ ಹೈಕಮಾಂಡ್​​ ಬಳಿ ಪ್ರಸ್ತಾಪಿಸಿದ್ದ ಅವರು, ಬೃಹತ್ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ನೀಡಿದ್ದರು ಎಂದು ಹೇಳಲಾಗಿದೆ. ಇದರ ಬೆನ್ನಲ್ಲೇ ಬಿಜೆಪಿ ಬಿಡುವ ನಿರ್ಧಾರಕ್ಕೆ ಅರ್ಜುನ್​ ಸಿಂಗ್​ ಬಂದಿದ್ದು, ತೃಣಮೂಲ ಕಾಂಗ್ರೆಸ್ ಸೇರುವ ಬಗ್ಗೆ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

ಇತ್ತ, ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಸಮಿಕ್ ಭಟ್ಟಾಚಾರ್ಯ, ಪಕ್ಷದಲ್ಲಿ ಇರಬೇಕೋ ಅಥವಾ ಬೇಡವೋ ಎಂಬ ಸಂಪೂರ್ಣ ತಿರ್ಮಾನ ಅರ್ಜುನ್ ಸಿಂಗ್ ಅವರಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆ ಜಾರಿ, ಔರಂಗಾಬಾದ್ ನಗರದ ಹೆಸರು ಬದಲಿಸಲು ರಾಜ್​ ಠಾಕ್ರೆ ಆಗ್ರಹ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.