ETV Bharat / bharat

ಮೋದಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ: ಯುನಿವರ್ಸಲ್ 'ವ್ಯಾಕ್ಸಿನೇಷನ್ ನೀತಿ ಟೊಳ್ಳು ಎಂದ ದೀದಿ - ಪಶ್ಚಿಮ ಬಂಗಾಳದಲ್ಲಿ ಕೋವಿಡ್​ ವ್ಯಾಕ್ಸಿನ್​ ಲಭ್ಯತೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ಕೋವಿಡ್​ ಲಸಿಕೆಗಳ ಲಭ್ಯತೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

Prime Minister
ಮಮತಾ ಬ್ಯಾನರ್ಜಿ ಮೋದಿಗೆ ಪತ್ರ
author img

By

Published : Apr 20, 2021, 4:48 PM IST

ಕೋಲ್ಕತ್ತಾ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ಕೋವಿಡ್​ ವ್ಯಾಕ್ಸಿನ್​ ಲಭ್ಯತೆ ಕುರಿತು ಮತ್ತು ಹೆಚ್ಚುವರಿ ಕೋವಿಡ್​ ವ್ಯಾಕ್ಸಿನ್​ ಹಾಗೂ ಔಷಧ ಒದಗಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ ಮಮತಾ ಬ್ಯಾನರ್ಜಿ 2021 ರ ಏಪ್ರಿಲ್ 19 ರಂದು ಕೇಂದ್ರ ಸರ್ಕಾರವು ಹೆಚ್ಚು ವಿಳಂಬ ಸಾರ್ವತ್ರಿಕ ಲಸಿಕೆ ನೀತಿಯನ್ನು ಘೋಷಿಸಿದೆ, ಅದು ಟೊಳ್ಳಾಗಿ ಕಾಣುತ್ತದೆ, ಇದು ಬಿಕ್ಕಟ್ಟಿನ ಸಮಯದಲ್ಲಿ ಕೇಂದ್ರ ಸರ್ಕಾರ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಪ್ರದರ್ಶನ ತೋರುತ್ತಿರುವುದು ವಿಷಾದನೀಯ ಎಂದು ಬರೆದಿದ್ದಾರೆ. ದೇಶದ ಜನರಿಗೆ ಲಸಿಕೆಗಳನ್ನು ಲಭ್ಯವಾಗುವಂತೆ ಮಾಡುವ ಜವಾಬ್ದಾರಿಯಿಂದ ಕೇಂದ್ರ ದೂರ ಸರಿಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

"ಅಗತ್ಯವಿರುವ ಲಸಿಕೆಗಳು ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿಲ್ಲ ಎಂದು ನಾನು ಮತ್ತೊಮ್ಮೆ ಹೇಳಲು ಬಯಸುತ್ತೇನೆ ಮತ್ತು ಲಸಿಕೆಗಳ ಲಭ್ಯತೆಯನ್ನು ಶೀಘ್ರವಾಗಿ ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಬೇಕು" ಎಂದು ಪತ್ರದಲ್ಲಿ ಮಮತಾ ಒತ್ತಾಯಿಸಿದ್ದಾರೆ. ಲಸಿಕೆ ಸಂಬಂಧ ಇರುವ ಎಲ್ಲ ಸಮಸ್ಯೆಗಳನ್ನು ಪರಿಹರಿಸುವ ನ್ಯಾಯಯುತ ಪಾರದರ್ಶಕ ಮತ್ತು ವಿಶ್ವಾಸಾರ್ಹ ವ್ಯಾಕ್ಸಿನೇಷನ್ ನೀತಿಯನ್ನು ಜಾರಿಗೊಳಿಸಬೇಕೆಂದು ನಾನು ಮನಃಪೂರ್ವಕವಾಗಿ ವಿನಂತಿಸುತ್ತೇನೆ, ಇದರಿಂದ ದೇಶದ ಜನರಿಗೆ ಕೈಗೆಟುಕುವ ಬೆಲೆಯಲ್ಲಿ ಲಸಿಕೆಗಳನ್ನು ತುರ್ತಾಗಿ ಪಡೆಯಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.