ಕೋಲ್ಕತ್ತಾ(ಪಶ್ಚಿಮ ಬಂಗಾಳ): ತೃಣಮೂಲ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮರು ಆಯ್ಕೆಯಾಗಿದ್ದಾರೆ. ಪಕ್ಷದ ಸಾಂಸ್ಥಿಕ ಚುನಾವಣೆಯಲ್ಲಿ ಅವರನ್ನ ಮತ್ತೊಂದು ಅವಧಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಕೋಲ್ಕತ್ತಾದ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಕ್ಷದ ಚುನಾವಣೆಗಳಲ್ಲಿ ಟಿಎಂಸಿ ಅಧ್ಯಕ್ಷರು ಮತ್ತು ಕಾರ್ಯಕಾರಿ ಸಮಿತಿಯನ್ನು ರಚನೆ ಮಾಡಲಾಯಿತು.
-
West Bengal CM Mamata Banerjee re-elected as TMC Chairperson unopposed pic.twitter.com/flTRj3V8j1
— ANI (@ANI) February 2, 2022 " class="align-text-top noRightClick twitterSection" data="
">West Bengal CM Mamata Banerjee re-elected as TMC Chairperson unopposed pic.twitter.com/flTRj3V8j1
— ANI (@ANI) February 2, 2022West Bengal CM Mamata Banerjee re-elected as TMC Chairperson unopposed pic.twitter.com/flTRj3V8j1
— ANI (@ANI) February 2, 2022
ಪಕ್ಷದ ಅಧ್ಯಕ್ಷೆಯಾಗಿ ಮತ್ತೊಂದು ಅವಧಿಗೆ ಆಯ್ಕೆಯಾಗುತ್ತಿದ್ದಂತೆ ಮಾಧ್ಯಮಗೋಷ್ಟಿಯಲ್ಲಿ ಭಾಗಿಯಾಗಿ ಮಾತನಾಡಿರುವ ಮಮತಾ ಬ್ಯಾನರ್ಜಿ, 2024ರ ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಉತ್ತರ ಪ್ರದೇಶದಿಂದ ಸ್ಪರ್ಧೆ ಮಾಡಲಿದೆ ಎಂದರು. ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿರುದ್ಧ ಹೋರಾಡಲು ಎಲ್ಲ ಪ್ರಾದೇಶಿಕ ಪಕ್ಷಗಳು ಒಂದಾಗಬೇಕು ಎಂದು ಕರೆ ನೀಡಿರುವ ದೀದಿ, ಎಲ್ಲರೂ ಒಂದಾಗಿ ಹೋರಾಡಿದಾಗ ಮಾತ್ರ ಬಿಜೆಪಿ ಸೋಲಿಸಲು ಸಾಧ್ಯ ಎಂದರು. ಜೊತೆಗೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವುದಾಗಿ ಪ್ರತಿಜ್ಞೆ ಮಾಡಿದರು.
7-8 ಬಿಜೆಪಿ ನಾಯಕರು ಟಿಎಂಸಿ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆಂದು ಹೇಳಿರುವ ಮಮತಾ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿರುವ ಬಜೆಟ್ ವಿರುದ್ಧ ವಾಗ್ದಾಳಿ ನಡೆಸಿದರು. ಬಜೆಟ್ನಲ್ಲಿ ಕಾರ್ಮಿಕರು, ರೈತರು ಮತ್ತು ಜನಸಾಮಾನ್ಯರಿಗೆ ಯಾವುದೇ ರೀತಿಯ ಯೋಜನೆ ಘೋಷಣೆಯಾಗಿಲ್ಲ ಎಂದು ಟೀಕಿಸಿದರು.
ಕೇಂದ್ರ ಬಿಜೆಪಿ ಬಳಿ ಮೂರು ಆಯುಧಗಳಿವೆ, ಜಾರಿ ನಿರ್ದೇಶನಾಲಯ, ಕೇಂದ್ರ ತನಿಖಾ ದಳ ಹಾಗೂ ನಗದು ಹಣ. ಇವುಗಳನ್ನ ಬಳಸಿಕೊಂಡು ದೇಶದಲ್ಲಿ ದುರಾಡಳಿತ ನಡೆಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದರು.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ