ETV Bharat / bharat

ಲೈಂಗಿಕ ಕಿರುಕುಳ ಆರೋಪ:WFI ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿಚಾರಣೆ - etv bharat kannada

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಕ್ಕೆ ಸಂಬಂಧಿಸಿದಂತೆ ಅವರನ್ನು ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

wfi-president-brij-bhushan-statement-recorded-by-delhi-police
ಲೈಂಗಿಕ ಕಿರುಕುಳ ಆರೋಪ:WFI ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿಚಾರಣೆ
author img

By

Published : May 12, 2023, 4:24 PM IST

ನವದೆಹಲಿ: ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಭಾರತದ ರೆಸ್ಲಿಂಗ್ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಡಬ್ಲ್ಯುಎಫ್‌ಐನ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರ ಹೇಳಿಕೆಯನ್ನೂ ದಾಖಲಿಸಿಕೊಂಡಿರುವುದಾಗಿ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಕಳೆದ ತಿಂಗಳು ದೆಹಲಿ ಪೊಲೀಸರು ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ) ಸೇರಿ ಎರಡು ಎಫ್​ಐಆರ್ ದಾಖಲಿಸಿದ್ದರು.

ತನಿಖೆಗೆ ಹಾಜರಾಗುವಂತೆ ಸಿಂಗ್ ಅವರಿಗೆ ನೋಟಿಸ್ ಕಳುಹಿಸಲಾಗಿತ್ತು. ಅವರ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಕ್ಕೆ ಸಂಬಂಧಿಸಿದಂತೆ ಅವರನ್ನು ಸುಮಾರು ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಬಿಜೆಪಿ ಸಂಸದರೂ ಆಗಿರುವ ಸಿಂಗ್ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಕೂಡ ವಿಚಾರಣೆಗೊಳಪಡಿಸಿದೆ.

ಈ ಎರಡು ಸಂದರ್ಭದಲ್ಲಿ ಅವರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿ, ಪ್ರಕರಣದಲ್ಲಿ ತಮ್ಮ ಮೇಲೆ ಸುಳ್ಳು ಆರೋಪ ಮಾಡಲಾಗಿದೆ ಎಂದು ಹೇಳಿದ್ದಾರೆ. ಹೀಗಾಗಿ ಸಂಬಂಧಪಟ್ಟ ದಾಖಲೆಗಳು ಅಥವಾ ಪುರಾವೆಗಳನ್ನು ಸಲ್ಲಿಸುವಂತೆ ಬ್ರಿಜ್​ ಅವರಿಗೆ ಸೂಚಿಸಲಾಗಿದೆ. ಇದುವರೆಗೆ 30 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿದ್ದು, ಇನ್ನೂ ಹೆಚ್ಚಿನ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಬೇಕಿರುವುದರಿಂದ ಸಿಂಗ್ ಅವರನ್ನು ಮತ್ತಷ್ಟು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

"ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥರ ವಿರುದ್ಧ ಲೈಂಗಿಕ ಕಿರುಕುಳದ ದೂರುಗಳ ತನಿಖೆಗಾಗಿ ರಚಿಸಲಾದ ಮೇಲ್ವಿಚಾರಣಾ ಸಮಿತಿಯ ವರದಿಯನ್ನು ನಾವು ಸ್ವೀಕರಿಸಿದ್ದೇವೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣದ ತನಿಖೆಯ ಭಾಗವಾಗಿ ದೆಹಲಿ ಪೊಲೀಸರ ಹಲವು ತಂಡಗಳನ್ನು ಉತ್ತರ ಪ್ರದೇಶ, ಜಾರ್ಖಂಡ್, ಕರ್ನಾಟಕ ಮತ್ತು ಹರಿಯಾಣ ರಾಜ್ಯಗಳಿಗೆ ಕುಸ್ತಿಪಟುಗಳ ಹೇಳಿಕೆಗಳನ್ನು ದಾಖಲಿಸಲು ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಲು ಕಳುಹಿಸಲಾಗಿದೆ. ಇಲ್ಲಿಯವರೆಗೆ, ಸಿಂಗ್ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಅಪ್ರಾಪ್ತ ವಯಸ್ಕನ ಹೇಳಿಕೆಯನ್ನು ಮಾತ್ರ ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗಿದೆ. ಶೀಘ್ರದಲ್ಲೇ, ಉಳಿದ ಆರು ಮಹಿಳಾ ಕುಸ್ತಿಪಟುಗಳ ಹೇಳಿಕೆಗಳನ್ನು ಸಹ ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಸಿಆರ್‌ಪಿಸಿ ಸೆಕ್ಷನ್ 161 ರ ಅಡಿ ಅಪ್ರಾಪ್ತ ವಯಸ್ಕ ಸೇರಿದಂತೆ ಎಲ್ಲ ಏಳು ಮಹಿಳಾ ದೂರುದಾರರ ಹೇಳಿಕೆಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಮತ್ತೊಂದೆಡೆ ಇಂದು ದೆಹಲಿ ಪೊಲೀಸರು ಈ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸಲಾಗಿದೆ ಎಂದು ವಿಶೇಷ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ. ನ್ಯಾಯಾಲಯದ ಹಿಂದಿನ ಆದೇಶಕ್ಕೆ ಪ್ರತಿಕ್ರಿಯೆಯಾಗಿ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರ ಮುಂದೆ ಸಲ್ಲಿಸಲಾಯಿತು. ಈ ಪ್ರಕರಣದ ಸ್ಥಿತಿಗತಿ ವರದಿಯನ್ನು ಮುಚ್ಚಿದ ಕವರ್‌ನಲ್ಲಿ ಸಲ್ಲಿಸಲಾಗಿದೆ ಮತ್ತು ಪ್ರಕರಣದ ಸ್ವರೂಪವನ್ನು ಪರಿಗಣಿಸಿ ಅದನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ ನ್ಯಾಯಾಲಯಕ್ಕೆ ತಿಳಿಸಿದರು.

ನಂತರ ನ್ಯಾಯಾಲಯವು ಮೇ 27 ರಂದು ಹೆಚ್ಚಿನ ವಿಚಾರಣೆಗೆ ಪ್ರಕರಣವನ್ನು ಮುಂದೂಡಿದೆ. ತನಿಖೆಯ ಮೇಲ್ವಿಚಾರಣೆ ಮತ್ತು ನ್ಯಾಯಾಲಯದ ಮುಂದೆ ಸಂತ್ರಸ್ತರ ಹೇಳಿಕೆಯನ್ನು ದಾಖಲಿಸಲು ಕೋರಿ ಕುಸ್ತಿಪಟುಗಳು ಸಲ್ಲಿಸಿದ ಮನವಿಯ ಮೇಲೆ ನ್ಯಾಯಾಧೀಶರು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ್ದರು. ಭಾರತದ ರೆಸ್ಲಿಂಗ್ ಫೆಡರೇಶನ್ ಮುಖ್ಯಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಲವಾರು ಕುಸ್ತಿಪಟುಗಳು ಏಪ್ರಿಲ್ 23 ರಿಂದ ಜಂತರ್ ಮಂತರ್‌ನಲ್ಲಿ ಧರಣಿ ನಡೆಸುತ್ತಿದ್ದಾರೆ. ಅವರಿಗೆ ಈ ಹೋರಾಟಕ್ಕೆ ರೈತ ಸಂಘಟನೆಗಳು ಸಹ ಬೆಂಬಲ ವ್ಯಕ್ತಪಡಿಸಿವೆ.

ಇದನ್ನೂ ಓದಿ: 2ನೇ ದಿನಕ್ಕೆ ಕಾಲಿಟ್ಟ ಸಚಿನ್ ಪೈಲಟ್​​ 'ಜನ ಸಂಘರ್ಷ ಯಾತ್ರೆ': ವಿಡಿಯೋ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.