ETV Bharat / bharat

ಆಗಸ್ಟ್ ತಿಂಗಳಲ್ಲಿ 20.7 ಲಕ್ಷ ಭಾರತೀಯರ ವಾಟ್ಸ್​ಆ್ಯಪ್​ ಖಾತೆಗಳು ಬ್ಯಾನ್‌

author img

By

Published : Oct 2, 2021, 7:45 AM IST

ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಹಾನಿಕಾರಕ ನಡವಳಿಕೆ ಮತ್ತು ಸ್ಪ್ಯಾಮ್ ತಡೆಗಟ್ಟಲು ಆಗಸ್ಟ್ 1 ರಿಂದ 31 ರ ನಡುವೆ ವಾಟ್ಸ್​ಆ್ಯಪ್​ 20.7 ಲಕ್ಷ ಭಾರತೀಯ ಖಾತೆಗಳನ್ನು ನಿಷೇಧಿಸಿದೆ ಎಂದು ಕಂಪನಿಯ ಎರಡನೇ ಮಾಸಿಕ ವರದಿಯಲ್ಲಿ ತಿಳಿಸಿದೆ.

WhatsApp
WhatsApp

ನವದೆಹಲಿ: ಹೊಸ ಐಟಿ ನಿಯಮಗಳು 2021 ರ ಪ್ರಕಾರ ಆಗಸ್ಟ್ ತಿಂಗಳಲ್ಲಿ ಭಾರತದಲ್ಲಿ 20.7 ಲಕ್ಷ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ಫೇಸ್​ಬುಕ್​ ಒಡೆತನದ ಕಂಪನಿ ವಾಟ್ಸ್​​ಆ್ಯಪ್​ ತಿಳಿಸಿದೆ.

ಆಗಸ್ಟ್ 1 ರಿಂದ ಆಗಸ್ಟ್ 31 ರ 30 ದಿನಗಳ ಅವಧಿಗೆ ಕಂಪನಿಯು ತನ್ನ ಎರಡನೇ ಮಾಸಿಕ ವರದಿಯನ್ನು ಬಿಡುಗಡೆ ಮಾಡಿದಾಗ ಈ ಅಂಶ ಬೆಳಕಿಗೆ ಬಂದಿದೆ. ವರದಿ ಪ್ರಕಾರ, ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್) ನಿಯಮಗಳು 2021 ರ ಅಡಿ ಭಾರತದ ಬಳಕೆದಾರರಿಂದ ಇ-ಮೇಲ್ ಮೂಲಕ ಸ್ವೀಕರಿಸಿದ 420 ಕುಂದುಕೊರತೆಗಳನ್ನು ವಾಟ್ಸ್​ಆ್ಯಪ್​ ಸ್ವೀಕರಿಸಿದೆ.

ಈ ಕುರಿತು ಮಾಹಿತಿ ನೀಡಿರುವ ವಾಟ್ಸ್​ಆ್ಯಪ್​ ವಕ್ತಾರರು, "ಈ ಬಳಕೆದಾರರ ಸುರಕ್ಷತಾ ವರದಿಯು ಸ್ವೀಕರಿಸಿದ ಬಳಕೆದಾರರ ದೂರುಗಳ ವಿವರಗಳನ್ನು ಮತ್ತು ವಾಟ್ಸ್​​ಆ್ಯಪ್​ ತೆಗೆದುಕೊಂಡ ಕ್ರಮವನ್ನು ಒಳಗೊಂಡಿದೆ.

ಜೊತೆಗೆ ವಾಟ್ಸ್​​ಆ್ಯಪ್​ನಲ್ಲಿ ಸಂಭವಿಸುತ್ತಿರುವ ದುರುಪಯೋಗ ತಡೆಗಟ್ಟುವ ಕುರಿತು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹಾನಿಕಾರಕ ಅಥವಾ ಅನಗತ್ಯ ಸಂದೇಶಗಳನ್ನು ಕಳುಹಿಸುವುದನ್ನು ತಡೆಯುವುದರತ್ತ ನಾವು ಹೆಚ್ಚು ಗಮನ ಹರಿಸಿದ್ದೇವೆ. ಅಸಹಜವಾದ ಸಂದೇಶಗಳನ್ನು ಕಳುಹಿಸುವ ಈ ಖಾತೆಗಳನ್ನು ಗುರುತಿಸಲು ನಾವು ಸುಧಾರಿತ ಸಾಮರ್ಥ್ಯಗಳನ್ನು ಬಳಸಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇನ್ನು ಜೂನ್ 16 ರಿಂದ ಜುಲೈ 31 ರ ಅವಧಿಯಲ್ಲಿ ವಾಟ್ಸ್​ಆ್ಯಪ್​ ಹೊಸ ಐಟಿ ನಿಯಮಗಳಿಗೆ ಅನುಸಾರವಾಗಿ ಭಾರತದಲ್ಲಿ 30.2 ಲಕ್ಷ ಖಾತೆಗಳನ್ನು ನಿಷೇಧಿಸಿತ್ತು. ಇದೀಗ ಆಗಸ್ಟ್ ತಿಂಗಳಲ್ಲಿ 20.7 ಲಕ್ಷ ಖಾತೆಗಳನ್ನು ನಿಷೇಧಿಸಿರುವುದಾಗಿ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.