ನವದೆಹಲಿ: ಸಂವಿಧಾನವು ಮೂರು ಅಂಗಗಳ ನಡುವೆ ಅಧಿಕಾರವನ್ನು ಪ್ರತ್ಯೇಕಿಸುತ್ತದೆ. ಎಲ್ಲರೂ ತಮ್ಮ ಕರ್ತವ್ಯ ನಿರ್ವಹಿಸುವಾಗ, ತಮ್ಮ ತಮ್ಮ 'ಲಕ್ಷ್ಮಣ ರೇಖೆ'ಯ ಬಗ್ಗೆ ಜಾಗರೂಕರಾಗಿರಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಶನಿವಾರ ಹೇಳಿದ್ದಾರೆ.
ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮ್ಮೇಳನದಲ್ಲಿ ಮಾತನಾಡಿದ ಎನ್.ವಿ.ರಮಣ, ನ್ಯಾಯಾಂಗ ತೀರ್ಪುಗಳನ್ನು ನೀಡಿದರೂ ಸರ್ಕಾರಗಳು ಉದ್ದೇಶಪೂರ್ವಕವಾಗಿ ನಿಷ್ಕ್ರಿಯತೆ ಇರುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಂವಿಧಾನವು ಮೂರು ಅಂಗಗಳ ನಡುವೆ ಅಧಿಕಾರ ಪ್ರತ್ಯೇಕಿಸುತ್ತದೆ. ಮೂರು ಅಂಗಗಳ ನಡುವಿನ ಸಾಮರಸ್ಯ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಕರ್ತವ್ಯವನ್ನು ನಿರ್ವಹಿಸುವಾಗ ನಾವು ಲಕ್ಷ್ಮಣ ರೇಖೆಯ ಬಗ್ಗೆ ಸದಾ ಎಚ್ಚರದಿಂದ ಇರಬೇಕು ಎಂದು ಅವರು ಹೇಳಿದ್ದಾರೆ. ಅಷ್ಟೇ ಅಲ್ಲದೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ದುರುಪಯೋಗದ ಬಗ್ಗೆ ಕಳವಳ ವ್ಯಕ್ತಪಡಿಸಿದ ಎನ್.ವಿ.ರಮಣ, ಈಗ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ವೈಯಕ್ತಿಕ ಹಿತಾಸಕ್ತಿ ಅರ್ಜಿಯಾಗಿ ಬದಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಪಟಿಯಾಲದಲ್ಲಿ ಘರ್ಷಣೆ: ಇಂಟರ್ನೆಟ್ ಸೇವೆ ಸ್ಥಗಿತ, ಅಧಿಕಾರಿಗಳ ಎತ್ತಂಗಡಿ